ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಂಸಾರಿಕವಾಗಿ ಮನೆಯ ಹಿರಿಯರ ಹಿತವಚನಗಳು ಸಮಾಧಾನ ತರಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಅನುಕೂಲಕರವಾದ ವಾತಾವರಣವಿರಲಿದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಕೂಡಿಟ್ಟ ಹಣ ಖರ್ಚಾಗುವ ಭೀತಿ ಎದುರಾಗಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ.ಮಿಥುನ: ಮಾನಸಿಕವಾಗಿ ನಿರ್ಧಾರ ತೆಗೆದುಕೊಳ್ಳುವಾಗ ಗೊಂದಲಗಳು ಕಂಡುಬಂದೀತು.