ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಪೋಷಕರಿಗೆ ನಿಮ್ಮ ಕೆಲವೊಂದು ಮಾತುಗಳು ಬೇಸರವುಂಟುಮಾಡೀತು. ತಾಳ್ಮೆ, ಸಂಯಮವಿರಲಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಸಂಬಂಧಗಳನ್ನು ಸಂರಕ್ಷಿಸುವ ಹೊಣೆಗಾರಿಕೆ ನಿಮ್ಮ ಮೇಲಿರಲಿದೆ. ಕೌಟುಂಬಿಕವಾಗಿ ಕೆಲವೊಂದು ಜವಾಬ್ಧಾರಿ ಹೆಗಲಿಗೇರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.ಮಿಥುನ: ಶೈಕ್ಷಣಿಕ ರಂಗದಲ್ಲಿರುವವರಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.