ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆರ್ಥಿಕವಾಗಿ ನೀವು ಹೆಚ್ಚು ಅಭಿವೃದ್ಧಿ ಹೊಂದಲಿದ್ದೀರಿ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದ್ದು, ಸಂತಸವಾಗಲಿದೆ. ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ದೇಹಾರೋಗ್ಯದಲ್ಲಿ ಏರುಪೇರಾದೀತು. ಕಾಳಜಿ ವಹಿಸಿ.ವೃಷಭ: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡುವ ಪರಿಸ್ಥಿತಿ ಎದುರಾದೀತು. ಮನೆಯಲ್ಲಿ ಶುಭ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗಕ್ಕಾಗಿ ಅಲೆದಾಟ ತಪ್ಪದು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.ಮಿಥುನ: ಗೃಹಕೃತ್ಯಗಳಲ್ಲಿ ಸಂಗಾತಿಯ ಸಹಕಾರ ಸಿಗಲಿದೆ.