Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಭಾನುವಾರ, 18 ಅಕ್ಟೋಬರ್ 2020 (09:05 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮನಸ್ಸಿಲ್ಲದೇ ಹೋದರೂ ಹೊಸ ಬದಲಾವಣೆಯನ್ನು ಒಪ್ಪಿಕೊಳ‍್ಳಬೇಕಾಗುತ್ತದೆ. ಸಂಗಾತಿಯೊಂದಿಗೆ ಹೊಂದಾಣಿಕೆ ಅಗತ್ಯ. ಮಹಿಳೆಯರಿಗೆ ಗೃಹ ಕೃತ್ಯಗಳಿಂದ ದೇಹ ಹೈರಾಣಾದೀತು.
 
ವೃಷಭ: ಯಾವುದೇ ಕೆಲಸಕ್ಕೆ ಕೈ ಹಾಕುವ ಮುನ್ನ ಯೋಚಿಸಿ ಕೈ ಹಾಕುವುದು ಒಳಿತು. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಭರವಸೆ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ದೊರೆಯಲಿದೆ.
 
ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಬೆಳವಣಿಗೆಗೆ ಪೂರಕವಾದ ವಾತಾವರಣ ಕಂಡುಬರಲಿದೆ. ದಾಯಾದಿ ಕಲಹಗಳಿಗೆ ಹಿರಿಯರ ಮಧ‍್ಯಸ್ಥಿಕೆಯೇ ಉತ್ತಮ. ಸರಕಾರಿ ಕೆಲಸದವರಿಗೆ ಬಿಡುವಿನ ಖುಷಿ ಸಿಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.
 
ಕರ್ಕಟಕ: ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.
 
ಸಿಂಹ: ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿ ಸಂಭವವಿದ್ದು, ಮನಸ್ಸಿಗೆ ಖುಷಿಯಾಗಲಿದೆ. ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ಹೊಸ ಯೋಜನೆಗಳಿಗೆ ಕೈ ಹಾಕಲು ಇದು ಸಕಾಲ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.
 
ಕನ್ಯಾ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಹಣ ವ್ಯಯಿಸಲಿದ್ದೀರಿ.
 
ತುಲಾ: ಜೀವನದಲ್ಲಿ ಅತಿ ಉತ್ಸುಕತೆಯೂ ಕೆಲವೊಮ್ಮೆ ತೊಂದರೆಯುಂಟು ಮಾಡೀತು. ಸರಿಯಾಗಿ ಪರಾಮರ್ಶಿಸಿ ಮುನ್ನಡೆಯುವುದು ಉತ್ತಮ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗುವಂತಹ ಘಟನೆಗಳು ನಡೆದೀತು. ತಾಳ್ಮೆಯಿಂದಿರಿ.
 
ವೃಶ್ಚಿಕ: ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ನಿಮ್ಮ ಹಿತಶತ್ರುಗಳ ಹುನ್ನಾರಗಳು ಬಯಲಿಗೆ ಬರಲಿವೆ. ಭವಿಷ್ಯದ ದೃಷ್ಟಿಯಿಂದ ಹಣ ಕೂಡಿಡುವಿರಿ. ಹಿರಿಯರಿಗೆ ಆರೋಗ್ಯದಲ್ಲಿ ಏರುಪೇರು ಸಂಭವ. ದೇವತಾ ಪ್ರಾರ್ಥನೆ ಮಾಡಿ.
 
ಧನು: ಕಷ್ಟಗಳು ಬಂದಾಗ ಸಿಂಹದಂತೆ ಗಟ್ಟಿಯಾಗಿ ನಿಂತು ಹೋರಾಡುವಿರಿ. ಆದರೆ ನಿಮ್ಮ ಕೆಲವೊಂದು ನಿರ್ಧಾರಗಳು ಬೇರೆಯವರಿಗೆ ಇಷ್ಟವಾಗದೇ ಹೋದೀತು. ಕಾರ್ಯನಿಮಿತ್ತ ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗುತ್ತದೆ.
 
ಮಕರ: ಯಾವುದೇ ವಿಚಾರಗಳನ್ನೂ ವಿವೇಚನೆಯಿಂದ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಮನೆಯಲ್ಲಿ ಹಿರಿಯರೊಡನೆ ಸಂಯಮದಿಂದ ವರ್ತಿಸಿ. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾದೀತು, ಕಾಳಜಿವಹಿಸಿ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
 
ಕುಂಭ: ಇಷ್ಟ ಮಿತ್ರರೊಂದಿಗೆ ಭೋಜನ, ಪ್ರವಾಸ ಯೋಗವಿದೆ. ಮನಸ್ಸು ಪ್ರಫುಲ್ಲವಾಗಿರುತ್ತದೆ. ಪ್ರೀತಿ ಪಾತ್ರರನ್ನು ಭೇಟಿಯಾಗಲಿದ್ದೀರಿ. ಆದರೆ ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.
 
ಮೀನ: ಪರಿಸ್ಥಿತಿಗೆ ತಕ್ಕಂತೆ ಹೊಂದಿಕೊಂಡರೆ ಯಾವುದೇ ತೊಂದರೆಯಾಗದು. ಗುರು ಹಿರಿಯರಲ್ಲಿ ಗೌರವವು ಹೆಚ್ಚಾಗಲಿದೆ. ನಿಮ್ಮ ಟೀಕೆ ಮಾಡುವವರನ್ನು ಸಕಾರಾತ್ಮಕವಾಗಿ ಸ್ವೀಕರಿಸಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.
ಇದರಲ್ಲಿ ಇನ್ನಷ್ಟು ಓದಿ :