ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಂಸಾರಿಕವಾಗಿ ಎಲ್ಲರೂ ಸಂಭ್ರಮದಲ್ಲಿದ್ದರೂ ನೀವು ಮಾತ್ರ ಏನೋ ಕಳೆದುಕೊಂಡ ನಿರುತ್ಸಾಹದಲ್ಲಿರುತ್ತೀರಿ. ಆತ್ಮೀಯರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.ವೃಷಭ: ದೇಹಾರೋಗ್ಯದಲ್ಲಿ ಏರುಪೇರ ಕಂಡುಬಂದೀತು. ಹೆಚ್ಚಿನ ಕಾಳಜಿವಹಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ನಿಮ್ಮ ಮುನ್ನಡೆಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ.ಮಿಥುನ: ಮನಸ್ಸಿಗೆ ಸಂತೋಷ ಕೊಡುವ ಕೆಲಸಗಳಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.