ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 9 ಡಿಸೆಂಬರ್ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಆದಾಯಕ್ಕೆ ಕೊರತೆಯಿಲ್ಲದಿದ್ದರೂ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಸಾಂಸಾರಿಕವಾಗಿ ಸಂಗಾತಿಯ ಸಹಕಾರ ಸಿಗಲಿದೆ. ಆದರೆ ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳು ಮಾಡಿಕೊಳ್ಳಬೇಡಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ವೃಷಭ: ವೃತ್ತಿರಂಗದಲ್ಲಿ ಸದವಕಾಶಗಳು ಬಂದಾಗ ಅದನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.
 
ಮಿಥುನ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ಅನ್ಯರ ವಿಚಾರಕ್ಕೆ ಅನಗತ್ಯ ತಲೆಕೆಡಿಸಿಕೊಳ್ಳುವುದು ಬೇಡ. ಹೊಸ ವ್ಯವಹಾರಗಳಿಗೆ ಬಂಡವಾಳ ಹೂಡಿಕೆ ಮಾಡಲಿದ್ದೀರಿ.
 
ಕರ್ಕಟಕ: ನಿಮ್ಮ ಕೆಲವೊಂದು ನಿರ್ಧಾರಗಳು ಪ್ರೀತಿ ಪಾತ್ರರ ಮನಸ್ಸಿಗೆ ಬೇಸರವುಂಟು ಮಾಡೀತು. ನಿರುದ್ಯೋಗಿಗಳು ಉದ್ಯೋಗ ಸಂದರ್ಶನ ನಿಮಿತ್ತ ದೂರ ಪ್ರಯಾಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತಿಗೇರುವ ಅವಕಾಶ ಸಿಗಲಿದೆ.
 
ಸಿಂಹ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಪದೋನ್ನತಿಯ ಸುಯೋಗ ಎದುರು ಬರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಮುನ್ನಡೆ ಕಾಣಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.
 
ಕನ್ಯಾ: ಗೊಂದಲದಲ್ಲಿರುವ ನಿಮಗೆ ನಿರ್ಧಾರ ತೆಗೆದುಕೊಳ್ಳುವ ಮಿತ್ರರು ಕೊಡುವ ಸಲಹೆಗಳು ಉಪಯೋಗಕ್ಕೆ ಬರಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾದೀತು. ಸ್ವಯಂ ವ್ಯವಹಾರಗಳಿಂದ ಲಾಭವಾಗಬಹುದು.
 
ತುಲಾ: ಮನೆಯಲ್ಲಿ ಕಲಹ, ಅಶಾಂತಿಯ ವಾತಾವರಣ ಕಂಡುಬಂದೀತು. ಭಿನ್ನಾಭಿಪ್ರಾಯಗಳಾಗದಂತೆ ಆದಷ್ಟು ಮಾತಿನ ಮೇಲೆ ನಿಗಾ ವಹಿಸಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕಿರು ಓಡಾಟ ನಡೆಸಬೇಕಾಗುತ್ತದೆ.
 
ವೃಶ್ಚಿಕ: ಪ್ರೇಮಿಗಳ ಗುಟ್ಟು ಮನೆಯವರ ಎದುರು ಬಹಿರಂಗವಾಗಲಿದೆ. ಕಳೆದು ಹೋದ ವಸ್ತುಗಳು ಮರಳಿ ಕೈ ಸೇರಿದ ಖುಷಿ ನಿಮ್ಮದಾಗಲಿದೆ. ಅನಿರೀಕ್ಷಿತವಾಗಿ ದೂರ ಸಂಚಾರ ಮಾಡಬೇಕಾಗಿ ಬಂದೀತು. ವಾಹನ ಚಾಲನೆಯಲ್ಲಿ ಎಚ್ಚರಿಕೆಯಿರಲಿ.
 
ಧನು: ನಿಮ್ಮ ಅಭಿಪ್ರಾಯಗಳನ್ನು ಇತರರ ಮೇಲೆ ಹೇರದಿರಿ. ಸಂಗಾತಿಯ ಮನಸ್ಸಿಗೆ ನೋವಾಗದಂತೆ ನಡೆದುಕೊಳ್ಳಿ. ಹಿತಶತ್ರುಗಳ ವಂಚನೆ ಬೆಳಕಿಗೆ ಬರಲಿದೆ. ಸ್ವಯಂ ಉದ್ಯೋಗಿಗಳಿಗೆ ಲಾಭವಿಲ್ಲದಿದ್ದರೂ ನಷ್ಟವಾಗದು. ಅನಗತ್ಯ ಚಿಂತೆ ಬೇಡ.
 
ಮಕರ: ನಿಮ್ಮ ಕೆಲವೊಂದು ನಿರ್ಧಾರಗಳಿಂದ ಆಪ್ತರ ಪಾಲಿಗೆ ನಿಷ್ಠುರರಾಗಬೇಕಾಗುತ್ತದೆ. ನೂತನ ದಂಪತಿಗಳಲ್ಲಿರುವ ಹೊಂದಾಣಿಕೆ ಸಮಸ್ಯೆಗಳು ಮನಸ್ಸು ಬಿಚ್ಚಿ ಮಾತನಾಡುವುದರಿಂದ ಪರಿಹಾರವಾಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿ.
 
ಕುಂಭ: ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಉದ್ಯೋಗದಲ್ಲಿ ಹಿನ್ನಡೆಯ ಭೀತಿ ಎದುರಾದೀತು. ಆರ್ಥಿಕವಾಗಿ ಹಿತ ಮಿತವಾಗಿ ಖರ್ಚು ಮಾಡುವುದು ಭವಿಷ್ಯದ ದೃಷ್ಟಿಯಿಂದ ಉತ್ತಮ. ಅನಿರೀಕ್ಷಿತವಾಗಿ ಭೇಟಿಯಾಗುವ ಮಿತ್ರರಿಂದ ಮನಸ್ಸಿಗೆ ಖುಷಿಯಾಗಲಿದೆ.
 
ಮೀನ: ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಲಿದ್ಧೀರಿ. ಮಕ್ಕಳ ವಿಚಾರದಲ್ಲಿ ಭವಿಷ್ಯದ ಯೋಜನೆಗಳನ್ನು ರೂಪಿಸಲಿದ್ದೀರಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.
ಇದರಲ್ಲಿ ಇನ್ನಷ್ಟು ಓದಿ :