ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಶುಕ್ರವಾರ, 11 ಡಿಸೆಂಬರ್ 2020 (08:38 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಆಧ್ಯಾತ್ಮಿಕತೆ ಬಗ್ಗೆ ಆಸಕ್ತಿ ಮೂಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳು ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಆರ್ಥಿಕವಾಗಿ ಬಾಕಿ ಹಣ ವಸೂಲಾತಿ ಚಿಂತನೆ ಕಾಡಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಮುನ್ನಡೆಯ ಯೋಗವಿದೆ.
 
ವೃಷಭ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗವಿದೆ. ವೃತ್ತಿರಂಗದಲ್ಲಿ ನಿಮ್ಮ ಪಾಂಡಿತ್ಯ ಪ್ರದರ್ಶನಕ್ಕೆ ವೇದಿಕೆ ಸಿಗಲಿದೆ. ಹಿರಿಯರ ಸಲಹೆಯಂತೆ ದಾಯಾದಿ ಕಲಹಗಳು ಪರಿಹಾರವಾಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಮಿಥುನ: ಕಾರ್ಯರಂಗದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾಗುವಂತಹ ಅವಕಾಶಗಳು ಒದಗಿಬರುವುದು. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಐಡಿಯಾಗಳು ಹೊಳೆಯಲಿವೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
 
ಕರ್ಕಟಕ: ಪ್ರೀತಿಪಾತ್ರರ ಒಡನಾಟದಿಂದ ನಿಮ್ಮ ಮನಸ್ಸಿಗೆ ಸಂತಸವಾಗುವುದು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಮಹಿಳೆಯರ ಗುಟ್ಟು ಬಯಲಾಗಲಿದೆ. ದೂರ ಸಂಚಾರ ಮಾಡಬೇಕಾಗಿ ಬರಲಿದೆ. ಪ್ರಯಾಣದಲ್ಲಿ ಎಚ್ಚರ.
 
ಸಿಂಹ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಸಮಸ್ಯೆಗಳ ಪರಿಹಾರ ಮಾಡಲಿದ್ದೀರಿ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಕಿರು ಸಂಚಾರ ಮಾಡಬೇಕಾಗಿ ಬರುತ್ತದೆ.
 
ಕನ್ಯಾ: ಅನಿರೀಕ್ಷಿತವಾಗಿ ಧನಲಾಭವಾಗಲಿದೆ. ದೈಹಿಕ ಆರೋಗ್ಯದಲ್ಲಿ ಏರುಪೇರಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ವ್ಯವಹಾರದಲ್ಲಿ ಚೇತರಿಕೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.
 
ತುಲಾ: ನಿರುದ್ಯೋಗಿಗಳಿಗೆ ಆಕಸ್ಮಿಕವಾಗಿ ಉತ್ತಮ ಅವಕಾಶಗಳು ಒದಗಿ ಬರಲಿದೆ. ಸಾಮಾಜಿಕವಾಗಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಪ್ರೇಮಿಗಳಿಗೆ ಶುಭ ದಿನ.
 
ವೃಶ್ಚಿಕ: ನಿಮ್ಮ ಕೆಲಸ ಕಾರ್ಯಗಳಿಗೆ ಅಡೆತಡೆಗಳು ಎದುರಾಗಲಿದೆ. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗುವ ತಾಳ್ಮೆ ಬೇಕು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ. ವೈಯಕ್ತಿಕ ಜೀವನದಲ್ಲಿ ಉನ್ನತಿಯ ಯೋಗವಿದೆ.
 
ಧನು: ಭವಿಷ್ಯದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡಬೇಡಿ. ಸರಕಾರಿ ಕೆಲಸದವರಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ.
 
ಮಕರ: ನೂತನ ದಂಪತಿಗಳು ಸಂತೋಷದ ಕ್ಷಣಗಳು ಕಳೆಯಲಿದ್ದಾರೆ. ನಿಮ್ಮ ಸಂಸಾರದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಯೋಗ ಕೂಡಿಬರಲಿದೆ. ಇಷ್ಟದೇವರ ಪ್ರಾರ್ಥನೆ ಮಾಡಿ.
 
ಕುಂಭ: ಮನಸ್ಸಿಗೆ ಇಷ್ಟವಾದವರ ಜೊತೆ ನಿಮ್ಮ ಭಾವನೆಗಳನ್ನು ಹಂಚಿಕೊಳ್ಳಲಿದ್ದೀರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಮಿತ್ರರ ಕಷ್ಟಕ್ಕೆ ಜೊತೆ ನೀಡಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಮೀನ: ದೂರ ಸಂಚಾರದಿಂದ ಕಾರ್ಯಪ್ರಾಪ್ತಿಯಾಗಲಿದೆ. ಹಿರಿಯರಿಗೆ ದಾನ ಧರ್ಮಾಧಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ಚಿಂತೆ ಬೇಡ.
ಇದರಲ್ಲಿ ಇನ್ನಷ್ಟು ಓದಿ :