ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಅಗತ್ಯಕ್ಕಿಂತ ಹೆಚ್ಚು ವೆಚ್ಚವಾಗುತ್ತಿದೆ ಎಂಬ ಆತಂಕ ಕಾಡೀತು. ಮನೆಯ ಹಿರಿಯ ಸದಸ್ಯರ ಆರೋಗ್ಯ ಚಿಂತೆಗೀಡು ಮಾಡಲಿದೆ. ಆದರೆ ಅನಗತ್ಯ ವಾದ ವಿವಾದಗಳಿಂದ ದೂರವಿದ್ದರೆ ಉತ್ತಮ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸದ ವಾತಾವರಣವಿರಲಿದೆ. ಇಷ್ಟಭೋಜನ ಮಾಡುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.ಮಿಥುನ: ಬಯಸಿದ ಉದ್ಯೋಗಕ್ಕೆ