ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನಲ್ಲೇ ಕೆಲವೊಂದು ವಿಚಾರಗಳನ್ನಿಟ್ಟುಕೊಂಡು ಕೊರಗುವ ಬದಲು ಹೇಳಿಕೊಂಡು ಹಗುರವಾಗುವುದು ಉತ್ತಮ. ಹಿರಿಯರ ಉಪದೇಶಗಳು ಹಿಡಿಸದೇ ಹೋಗಬಹುದು. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ.ವೃಷಭ: ನಿಮ್ಮ ಕ್ರಿಯಾಶೀಲತೆಗೆ ತಕ್ಕ ಮನ್ನಣೆ ಸಿಗಲಿದೆ. ಭವಿಷ್ಯದ ಯೋಜನೆಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತಲೆದೋರಿತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಅನಿರೀಕ್ಷಿತವಾಗಿ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.