ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 13 ಜನವರಿ 2021 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಮಹತ್ವದ ವಿಚಾರಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆದಾಯ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.
 
ವೃಷಭ: ಶಿಕ್ಷಣ ಕ್ಷೇತ್ರದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ನೆರವಿನಿಂದ ಕಷ್ಟಗಳನ್ನು ಪರಿಹರಿಸಿಕೊಳ್ಳಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
 
ಮಿಥುನ: ಶುಭ ಮಂಗಲ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಹಿತ್ಯ, ಕಲೆ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗವಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ. ಕಿರು ಸಂಚಾರ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಕರ್ಕಟಕ: ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಆದಾಯ ವೃದ್ಧಿಗೆ ನಾನಾ ದಾರಿ ಕಂಡುಕೊಳ್ಳಲಿದ್ದೀರಿ. ದೂರ ಸಂಚಾರ ಮಾಡಲಿದ್ದೀರಿ.
 
ಸಿಂಹ: ವ್ಯಾಪಾರ, ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಮಾನಸಿಕವಾಗಿ ದೃಢ ಸಂಕಲ್ಪದಿಂದ ಹೊಸ ಕೆಲಸಗಳಿಗೆ ಕೈ ಹಾಕಿದರೆ ಯಶಸ್ವಿಯಾಗಲಿದ್ದೀರಿ. ನಿಮ್ಮ ಮನಸ್ಸಿನ ಭಾವನೆಗಳಿಗೆ ಬೆಲೆಕೊಟ್ಟು ಮುನ್ನಡೆಯಿರಿ. ತಾಳ್ಮೆ, ಸಂಯಮವಿರಲಿ.
 
ಕನ್ಯಾ: ವೃತ್ತಿರಂಗದಲ್ಲಿ ಇದುವರೆಗೆ ಇದ್ದ ತೊಡಕುಗಳು ನಿವಾರಣೆಯಾಗಲಿದೆ. ಹಾಗಿದ್ದರೂ ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
 
ತುಲಾ: ದೈಹಿಕವಾಗಿ ನಿಮ್ಮ ಅಸಮರ್ಥತೆಯನ್ನು ಮುಚ್ಚಿಟ್ಟುಕೊಂಡರೆ ಮುಂದೆ ಅನಾಹುತ ತಪ್ಪಿದ್ದಲ್ಲ. ಪ್ರೀತಿ ಪಾತ್ರರೊಂದಿಗೆ ನಿಮ್ಮ ಮನಸ್ಸಿನ ದುಃಖ ಹಂಚಿಕೊಳ್ಳಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.
 
ವೃಶ್ಚಿಕ: ಯೋಜನೆ ಹಾಕಿದ ರೀತಿಯಲ್ಲೇ ಕೆಲಸ ಮಾಡಿದರೆ ಯಾವುದೇ ತೊಂದರೆಯಾಗದು. ಹಳೆಯ ವಸ್ತುಗಳನ್ನು ಕಾಪಾಡಿಕೊಳ್ಳುವ ಜವಾಬ್ಧಾರಿ ನಿಮ್ಮದಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ.
 
ಧನು: ಕಾರ್ಯರಂಗದಲ್ಲಿ ನಿಮ್ಮ ಹಿತಶತ್ರುಗಳ ಹುನ್ನಾರಗಳು ಬೆಳಕಿಗೆ ಬರಲಿವೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಮಹಿಳೆಯರಿಗೆ ಹೊಸ ವಸ್ತ್ರಾಭರಣಗಳ ಖರೀದಿ ಯೋಗವಿದೆ. ಮನೆಗೆ ನೆಂಟರಿಷ್ಟರ ಆಗಮನವಾಗಲಿದೆ.
 
ಮಕರ: ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಮನಸ್ಸಿಗೆ ಹತ್ತಿರವಾದವರ ಜೊತೆ ಸಂಬಂಧ ಗಟ್ಟಿಗೊಳಿಸಲಿದ್ದೀರಿ. ಇಷ್ಟ ಮಿತ್ರರೊಂದಿಗೆ ಇಷ್ಟ ಭೋಜನ ಸವಿಯುವ ಯೋಗವಿದೆ. ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ.
 
ಕುಂಭ: ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳಲಿದ್ಧೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿವೆ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.
 
ಮೀನ: ಬಹುದಿನಗಳ ನಿಮ್ಮ ಕನಸಿಗೆ ಜೀವ ತುಂಬಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಅಪಾಯ ಸಾಧ‍್ಯತೆಯಿದೆ, ಎಚ್ಚರಿಕೆಯಿರಲಿ.
ಇದರಲ್ಲಿ ಇನ್ನಷ್ಟು ಓದಿ :