ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಶುಕ್ರವಾರ, 15 ಜನವರಿ 2021 (09:03 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ವಿದ್ಯಾರ್ಥಿಗಳಿಗೆ ಅಭಿವೃದ್ಧಿಗೆ ಪೂರಕವಾದ ವಾತಾವರಣ ಕಂಡುಬರಲಿದೆ. ಕೆಟ್ಟ ಸ್ನೇಹಿತರ ಸಂಗದಿಂದ ದೂರವಿದ್ದರೆ ಉತ್ತಮ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ. ದೂರ ಪ್ರಯಾಣ ಮಾಡಲಿದ್ದೀರಿ.
 
ವೃಷಭ: ಕೌಟುಂಬಿಕವಾಗಿ ಸಂತಸದ ದಿನ ನಿಮ್ಮದಾಗಲಿದೆ. ಇಷ್ಟಮಿತ್ರರ ಭೇಟಿಯಾಗಲಿದ್ದೀರಿ. ಕಿರು ಪ್ರವಾಸದಿಂದ ಮನೋಲ್ಲಾಸವಾಗಲಿದೆ. ಆದರೆ ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಮಿತಿಯಿರಲಿ. ಕುಲದೇವರ ಪ್ರಾರ್ಥನೆ ಮಾಡಿ.
 
ಮಿಥುನ: ಇದುವರೆಗೆ ಕಷ್ಟವೆಂದುಕೊಂಡಿದ್ದ ಕೆಲಸಗಳು ಸುಗಮವಾಗಿ ನೆರವೇರಲಿದೆ. ನಿಮ್ಮ ಮನಸ್ಸಿನ ದುಃಖವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
 
ಕರ್ಕಟಕ: ವೃತ್ತಿರಂಗದಲ್ಲಿ ಅನಿರೀಕ್ಷಿತ ತಿರುವುಗಳು ಕಂಡುಬರಲಿದೆ. ಕೆಳ ಹಂತದ ನೌಕರರಿಗೆ ಮೇಲಧಿಕಾರಿಗಳಿಂದ ಕಿರಿ ಕಿರಿ ಕಂಡುಬಂದೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಸಿಂಹ: ನಿಮ್ಮ ವಾಹನ ಖರೀದಿ ಮಾಡುವ ಕನಸು ಸದ್ಯದಲ್ಲೇ ನನಸಾಗಲಿದೆ. ಫಲಾಪೇಕ್ಷೆಯಿಲ್ಲದೇ ಮಾಡುವ ಕೆಲಸದಿಂದ ಒಳಿತಾಗಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.
 
ಕನ್ಯಾ: ಅಧಿಕ ಲಾಭ ತರುವ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ನಿಮಗೆ ತೊಂದರೆ ಮಾಡುವವರಿಂದ ಮುಕ್ತಿ ಸಿಗಲಿದೆ. ದೈವಾನುಕೂಲದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರುವುದು.
 
ತುಲಾ: ನಿಮ್ಮ ಸಾಂಸಾರಿಕ ವಿಚಾರಗಳಲ್ಲಿ ಬೇರೆಯವರಿಗೆ ಮೂಗು ತೂರಿಸಲು ಅವಕಾಶ ಕೊಡಬೇಡಿ. ವ್ಯಾಪಾರಿಗಳು ವ್ಯವಹಾರದಲ್ಲಿ ಚೇತರಿಕೆ ಕಾಣಲಿದ್ದಾರೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ವಿದ್ಯಾರ್ಥಿಗಳಿಗೆ ಉನ್ನತಿಯ ಯೋಗವಿದೆ.
 
ವೃಶ್ಚಿಕ: ವ್ಯವಹಾರದಲ್ಲಿ ಶತ್ರುಪೀಡೆ ಕಂಡುಬಂದೀತು. ಅಂದುಕೊಂಡ ಕೆಲಸಗಳಿಗೆ ವಿಘ್ನ ಬಾಧೆಯಿದ್ದು, ನಿರಾಸೆಯಾದೀತು. ಆದರೆ ತಾಳ್ಮೆಗಡಬೇಡಿ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಇಷ್ಟಮಿತ್ರರ ಸಹಾಯ ಸಿಗಲಿದೆ.
 
ಧನು: ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ. ನಿಮ್ಮ ಪ್ರೀತಿ ಪಾತ್ರರ ಭೇಟಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ಆದರೆ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮರೆಯದಿರಿ.
 
ಮಕರ: ಹಿರಿಯ ಜೀವಗಳಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕುಟುಂಬದವರ ಮಾತಿಗೆ ಬೆಲೆಕೊಟ್ಟು ನಿರ್ಧಾರಗಳನ್ನು ತೆಗೆದುಕೊಂಡರೆ ಉತ್ತಮ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಪ್ರೇಮಿಗಳಿಗೆ ಶುಭ ದಿನ.
 
ಕುಂಭ: ಕಾರ್ಯದೊತ್ತಡದಿಂದಾಗಿ ಅಧಿಕ ಓಡಾಟ ನಡೆಸಬೇಕಾಗಬಹುದು. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ನಯವಂಚಕರ ಮಾತುಗಳಿಗೆ ಮರುಳಾಗಬೇಡಿ. ಕೃಷಿಕರಿಗೆ ವ್ಯವಹಾರದಲ್ಲಿ ತೊಡಕುಗಳಿದ್ದರೂ ಅಂತಿಮವಾಗಿ ಯಶಸ್ಸು ಸಿಗಲಿದೆ.
 
ಮೀನ: ಅಂದುಕೊಂಡಿದ್ದ ಶುಭ ಕಾರ್ಯ ಮುನ್ನಡೆಸಲು ವಿಘ್ನಗಳು ತೋರಿಬಂದೀತು. ಯೋಗ್ಯ ವಯಸ್ಕರು ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯುವುದು ಒಳಿತು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.
ಇದರಲ್ಲಿ ಇನ್ನಷ್ಟು ಓದಿ :