ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 20 ಜನವರಿ 2021 (09:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ನಿಮ್ಮ ತಪ್ಪುಗಳಿಗೆ ನೀವೇ ಬೆಲೆ ತೆರಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಿ. ವ್ಯಾಪಾರಿ ವ್ಯವಹಾರಿಗಳಿಗೆ ಅಪರಿಚಿತರೊಂದಿಗೆ ವ್ಯವಹಾರ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಉನ್ನತಿ.
 
ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ನಿಮ್ಮ ಮುಂದಿದ್ದ ತೊಡಕುಗಳು ನಿವಾರಣೆಯಾಗಲಿದೆ. ಆರ್ಥಿಕವಾಗಿ ಹಲವಾರು ಖರ್ಚು ವೆಚ್ಚಗಳು ಕಂಡುಬಂದೀತು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
 
ಮಿಥುನ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ಉಂಟಾಗುವುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ವೃದ್ಧಿಯಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತೆಗಳಿಂದ ಮುಕ್ತಿಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಕರ್ಕಟಕ: ಮನಸ್ಸಿನ ಭಾವನೆಗಳು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ವೈಯಕ್ತಿಕ ಸಮಸ್ಯೆಗಳನ್ನು ಇತರರಿಗೆ ಹೇಳಿಕೊಂಡರೆ ಪರಿಹಾರ ಸಿಗಲಿದೆ. ಧರ್ಮ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿಯಾಗುವುದು. ದೇವತಾ ಪ್ರಾರ್ಥನೆ ಮಾಡಿ.
 
ಸಿಂಹ: ಉತ್ತಮ ಆಲೋಚನೆಗಳಿಗೆ ತಕ್ಕ ಮನ್ನಣೆ ಸಿಗಲಿದೆ. ಕೌಟುಂಬಿಕವಾಗಿ ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಶುಭ ಮಂಗಲ ಕಾರ್ಯನಿಮಿತ್ತ ಸಂಚಾರ ಮಾಡಲಿದ್ದೀರಿ.
 
ಕನ್ಯಾ: ನಿಮ್ಮ ಭಾವನೆಯನ್ನು ಸಂಗಾತಿಗೆ ಅರ್ಥ ಮಾಡಿಸಲಿದ್ದೀರಿ. ಇದರಿಂದ ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮನೆಯ ಹಿರಿಯ ಸದಸ್ಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.
 
ತುಲಾ: ಕೌಟುಂಬಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ಮನೆಯ ಹಿರಿಯ ಸದಸ್ಯರಿಗೆ ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹಳೆಯ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.
 
ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸಂಭಾವ್ಯ ಅಪಾಯ ಎದುರಿಸಲು ಸಜ್ಜಾಗಿರಿ. ಸರಕಾರಿ ನೌಕರರಿಗೆ ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯ ಯೋಗವಿದೆ. ಖರ್ಚು ವೆಚ್ಚಗಳ ಬಗ್ಗೆ ಮಿತಿಯಿರಲಿ.
 
ಧನು: ಮನಸ್ಸಿನಲ್ಲಿ ಕಾಡುತ್ತಿರುವ ಕೆಲವೊಂದು ವಿಚಾರಗಳಿಗೆ ಆಪ್ತರೊಂದಿಗೆ ಹಂಚಿಕೊಂಡು ಪರಿಹಾರ ಕಂಡುಕೊಳ್ಳಲಿದ್ದಾರೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಸಿಕ್ಕೀತು. ಆದರೆ ಹೊಸ ವ್ಯವಹಾರಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳಿತು.
 
ಮಕರ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಹೊಸ ವ್ಯವಹಾರಗಳ ಬಗ್ಗೆ ಯೋಚನೆಗಳು ಮೂಡಲಿವೆ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಕೂಡಿಬರಲಿದೆ. ಮಕ್ಕಳ ಬೇಡಿಕೆ ಪೂರೈಸಲು ಖರ್ಚು ವೆಚ್ಚಗಳಾಗಲಿವೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
 
ಕುಂಭ: ಮನಸ್ಸಿನಲ್ಲಿ ಅಂದುಕೊಂಡ ಕಾರ್ಯಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಮಕ್ಕಳ ವಿಚಾರದಲ್ಲಿ ಸಂತಸದ ವಾರ್ತೆ ಕೇಳಿಬರಲಿದೆ. ಸಾಂಸಾರಿಕವಾಗಿ ಬಂಧು ಮಿತ್ರರ ಆಗಮನದಿಂದ ಮನಸ್ಸಿಗೆ ಸಂತಸವಾಗಲಿದೆ. ಶುಭವಾರ್ತೆ ಕೇಳಿಬರಲಿದೆ.
 
ಮೀನ: ದುಡುಕಿ ಮಾತನಾಡಿ ಪಶ್ಚಾತ್ತಾಪಪಡುವ ಪರಿಸ್ಥಿತಿ ಎದುರಾದೀತು. ತಾಳ್ಮೆ, ಸಂಯಮ ಅಗತ್ಯವಿದೆ. ನಿಮ್ಮ ಜೀವನವೇ ಬದಲಾವಣೆಯಾಗುವಂತಹ ಘಟನೆಗಳು ನಡೆದೀತು. ಕಾರ್ಯಾನುಕೂಲಕ್ಕಾಗಿ ಕೆಲವು ಹೊಂದಾಣಿಕೆ ಅಗತ್ಯ.
ಇದರಲ್ಲಿ ಇನ್ನಷ್ಟು ಓದಿ :