ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಇಷ್ಟದೇವರ ದೇವಾಲಯ ಸಂದರ್ಶನ ಮಾಡುವ ಯೋಗ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ವೈಯಕ್ತಿಕ ವಿಚಾರದಲ್ಲಿ ನಿಮ್ಮ ಮನಸ್ಸಿನ ನೋವನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯ ಯೋಗವಿದೆ.ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ