ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಮಂಗಳವಾರ, 26 ಜನವರಿ 2021 (07:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ವೃತ್ತಿರಂಗದಲ್ಲಿ ಕಾರ್ಯಬಾಹುಳ್ಯದಿಂದಾಗಿ ದೇಹಾಯಾಸವಾದೀತು. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ಕಂಡುಬಂದೀತು. ಆರ್ಥಿಕವಾಗಿ ಅಧಿಕ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.
 
ವೃಷಭ: ನಿಮ್ಮ ಮನಸ್ಸಿನಲ್ಲಿ ಬಹಳ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಆಪ್ತರಿಂದ ಪರಿಹಾರ ಪಡೆದುಕೊಳ‍್ಳಲಿದ್ದೀರಿ. ವ್ಯಾಪಾರ,ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಅವಸರದ ನಿರ್ಧಾರ ಬೇಡ.
 
ಮಿಥುನ: ಕೋಪದ ಕೈಗೆ ಬುದ್ಧಿಕೊಟ್ಟು ಸಂಬಂಧ ಹಾಳು ಮಾಡಿಕೊಳ್ಳಬೇಡಿ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಅಗತ್ಯ. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ವಿಘ್ನಗಳು ತೋರಿಬಂದೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ.
 
ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕಾಗಿ ಸಂದರ್ಶನ ಕರೆ ಬರಲಿದ್ದು, ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಮೆಚ್ಚಿನ ವ್ಯಕ್ತಿಗಳನ್ನು ಅನಿರೀಕ್ಷಿತವಾಗಿ ಭೇಟಿಯಾದ ಸಂತೋಷ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಸಕಾಲ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ದೂರವಾಗಲಿದ್ದು, ಆದಾಯ ಹೆಚ್ಚಳವಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ರಾಜಯೋಗವಿದೆ.
 
ಕನ್ಯಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಹೆಚ್ಚಾಗಲಿವೆ. ಪ್ರೀತಿ ಪಾತ್ರರ ಮನಸ್ಸಿನ ಮಾತುಗಳನ್ನು ಆಲಿಸಲಿದ್ದೀರಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ.
 
ತುಲಾ: ಬೇರೆಯವರು ನಿಮ್ಮ ಬಗ್ಗೆ ಏನು ಹೇಳುತ್ತಾರೋ ಎಂಬ ಚಿಂತೆಯಲ್ಲಿ ನಿಮ್ಮ ನಿರ್ಧಾರಗಳಿಂದ ಹಿಂದೆ ಸರಿಯುವುದು ಬೇಡ. ಸಂಗಾತಿಯ ಮನದಿಚ್ಚೆ ಪೂರೈಸಲು ಖರ್ಚು ವೆಚ್ಚಗಳಾದೀತು. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗವಿದೆ.
 
ವೃಶ್ಚಿಕ: ವಿರಾಮದ ದಿನದ ಖುಷಿ ಅನುಭವಿಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಪ್ರೇಮಿಗಳಿಗೆ ಮನೆಯವರ ಸಹಮತಿ ಪಡೆಯುವುದೇ ತಲೆನೋವಾಗಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.
 
ಧನು: ನಿಮ್ಮ ಕೆಲವೊಂದು ಮಾತುಗಳು ಕುಟುಂಬ ಸದಸ್ಯರ ಮನಸ್ಸಿಗೆ ಬೇಸರವುಂಟು ಮಾಡೀತು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಮನೆಗೆ ಅತಿಥಿಗಳ ಆಗಮನವಾಗಲಿದೆ.
 
ಮಕರ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಪ್ರಗತಿಗೆ ಪೂರಕವಾದ ಕೆಲಸಗಳಿಗೆ ಕೈ ಹಾಕಲಿದ್ಧೀರಿ. ಆರ್ಥಿಕವಾಗಿ ಧನಗಳಿಕಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.
 
ಕುಂಭ: ಸ್ವಯಂ ವ್ಯಾಪಾರಿಗಳಿಗೆ ಅಭಿವೃದ್ಧಿಗೆ ತೊಂದರೆಯಿರದು. ಆದರೆ ವಂಚನೆಗೊಳಗಾಗುವ ಭೀತಿಯೂ ಇದೆ. ಎಚ್ಚರಿಕೆಯಿರಲಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
 
ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಕೌಟುಂಬಿಕವಾಗಿ ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.
ಇದರಲ್ಲಿ ಇನ್ನಷ್ಟು ಓದಿ :