ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 27 ಜನವರಿ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ವೃತ್ತಿರಂಗದಲ್ಲಿ ಸದ್ಯದಲ್ಲೇ ನಿಮ್ಮ ಭಾಗ್ಯದ ಬಾಗಿಲು ತೆರೆಯಲಿದೆ. ನಿರುದ್ಯೋಗಿಗಳಿಗೆ ತಕ್ಕ ಉದ್ಯೋಗಾವಕಾಶಗಳು ದೊರೆಯಲಿವೆ. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಕೆಲವೊಂದು ವಿಚಾರಗಳನ್ನು ಹಂಚಿಕೊಳ್ಳಲು ಹಿಂಜರಿಯುವಿರಿ. ತಾಳ್ಮೆಯಿರಲಿ.
 
ವೃಷಭ: ಮನಸ್ಸಿನಾಳದಲ್ಲಿ ಕೊರೆಯುತ್ತಿದ್ದ ಚಿಂತೆಗಳಿಗೆ ಕಡಿವಾಣ ಹಾಕಲು ಪ್ರಯತ್ನ ನಡೆಸಲಿದ್ದೀರಿ. ವೃತ್ತಿರಂಗದಲ್ಲಿ ನಿಮ್ಮ ಏಳಿಗೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು. ವಿದ್ಯಾರ್ಥಿಗಳಿಗೆ ಸಾಧನೆ ಮಾಡಬೇಕಾದರೆ ಪರಿಶ್ರಮವೂ ಅಗತ್ಯ.
 
ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಗೆ ಸಹೋದ್ಯೋಗಿಗಳ ನೆರವು ಸಿಗಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಶುಭವಾಗುವುದು. ಹಿರಿಯರಿಗೆ ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
 
ಕರ್ಕಟಕ: ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಮಾನಸಿಕವಾಗಿ ಕಾಡುತ್ತಿದ್ದ ವಿಚಾರಗಳನ್ನು ಪ್ರೀತಿಪಾತ್ರರೊಂದಿಗೆ ಹಂಚಿಕೊಂಡು ಹಗುರವಾಗುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.
 
ಸಿಂಹ: ನೀವು ಮಾಡುವ ಕೆಲಸಗಳಿಂದಲೇ ಸಮಾಜದಲ್ಲಿ ಸ್ಥಾನ ಮಾನ ಹೆಚ್ಚಲಿದೆ. ಇತರರಿಗೆ ಸಹಾಯ ಮಾಡುವ ಗುಣ ಮುಂದೊಂದು ನಿಮಗೆ ಒಳಿತು ಮಾಡಲಿದೆ. ಆರ್ಥಿಕವಾಗಿ ಹಣಕಾಸಿನ ತೊಂದರೆಗಳು ನಿವಾರಣೆಯಾಗಲಿದೆ.
 
ಕನ್ಯಾ: ಪ್ರೀತಿ ಪಾತ್ರರೊಂದಿಗೆ  ಸಮಯ ಕಳೆಯಲು ಸಾಧ‍್ಯವಾಗದೇ ಮನಸ್ಸಿಗೆ ಬೇಸರವಾದೀತು. ಬಯಸಿದ ವಸ್ತು ಖರೀದಿಸಲು ಖರ್ಚು ವೆಚ್ಚಗಳಾದೀತು. ಮಕ್ಕಳ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಕೈಗೊಳ್ಳುವುದು ಉತ್ತಮ.
 
ತುಲಾ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ ವಾತಾವರಣವಿದ್ದರೂ ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ವ್ಯಾಪಾರಿಗಳಿಗೆ ಆದಾಯ ವೃದ್ಧಿಗೆ ಹೊಸ ದಾರಿಗಳು ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.
 
ವೃಶ್ಚಿಕ: ಇದುವರೆಗೆ ಕಾಡುತ್ತಿದ್ದ ವೃತ್ತಿರಂಗದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸಂಗಾತಿಯೊಂದಿಗೆ ಪರಾಮರ್ಶಿಸಿ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ. ಅನಿರೀಕ್ಷಿತವಾಗಿ ಪ್ರೀತಿ ಪಾತ್ರರನ್ನು ಭೇಟಿ ಮಾಡುವುದರಿಂದ ಮನಸ್ಸಿಗೆ ಸಂತಸವಾಗಲಿದೆ.
 
ಧನು: ಮನೆಯಲ್ಲಿ ಸಣ್ಣ ಪುಟ್ಟ ಮನಸ್ತಾಪಗಳು ಕಂಡುಬಂದೀತು. ಮಾತಿನ ಮೇಲೆ ನಿಗಾ ಇರಲಿ. ತಾಳ್ಮೆ, ಸಂಯಮ ಅಗತ್ಯ. ಶೈಕ್ಷಣಿಕ ರಂಗದಲ್ಲಿರುವವರಿಗೆ ಪ್ರಗತಿ ಯೋಗವಿದೆ. ಅನಿರೀಕ್ಷಿತ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
 
ಮಕರ: ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಕುಲದೇವರ ಪ್ರಾರ್ಥನೆ ಮಾಡಿದರೆ ಒಳಿತು.
 
ಕುಂಭ: ನಿಮ್ಮ ಮನಸ್ಸಿನಲ್ಲಿರುವ ವಿಚಾರವನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳುವುದರಿಂದ ಹಗುರವಾಗಲಿದ್ದೀರಿ. ನೂತನ ದಂಪತಿಗಳಿಗೆ ಹೊಂದಾಣಿಕೆ ಕೊರತೆ ಉಂಟಾದೀತು. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ.
 
ಮೀನ: ಹೊಸ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ನಿಮ್ಮ ಕಾರ್ಯಸಾಧನೆಗೆ ಪೂರಕ ವಾತಾವರಣವಿರಲಿದೆ. ದಾಂಪತ್ಯ ಸುಖಕ್ಕೆ ಕೊರತೆಯಿರದು. ವೃತ್ತಿರಂಗದಲ್ಲಿ ತಟಸ್ಥರಾಗಿರುವುದೇ ಉತ್ತಮ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.
ಇದರಲ್ಲಿ ಇನ್ನಷ್ಟು ಓದಿ :