ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮುಂದಿನ ಭವಿಷ್ಯಕ್ಕಾಗಿ ಉತ್ತಮ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಬರವಣಿಗೆ ಕ್ಷೇತ್ರದಲ್ಲಿರುವವರಿಗೆ ಉನ್ನತ ಸಾಧನೆ ಮಾಡುವ ಅವಕಾಶ. ದೇಹಾರೋಗ್ಯದಲ್ಲಿ ಕೊಂಚ ಸುಧಾರಣೆ ಕಂಡುಬರಲಿದೆ. ಮಿಥ್ಯಾರೋಪಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ.ವೃಷಭ: ರಾಜಕೀಯ ರಂಗದಲ್ಲಿರುವವರು ವರ್ಚಸ್ಸು ಕಳೆದುಕೊಳ್ಳಲಿದ್ದಾರೆ. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಿ ವಿವಾದಕ್ಕೀಡಾಗಬೇಡಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಸಾಧನೆಯನ್ನು ತಡೆಯಲು ಯಾರಿಂದಲೂ ಸಾಧ್ಯವಾಗದು.