ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಕೆಲಸಗಳಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ನಿವಾರಣೆಯಾಗಲಿವೆ. ಮನಸ್ಸಿಗೆ ಇಷ್ಟವಾಗುವ ಕೆಲಸ ಮಾಡಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಏಳಿಗೆಗೆ ಸಹಕಾರಿಯಾಗುವಂತ ಬೆಳವಣಿಗೆಗಳು ನಡೆಯಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಸ್ವಯಂ ವ್ಯಾಪಾರಿಗಳಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ಬಹುದಿನಗಳ ಕನಸು ನನಸು ಮಾಡಿಕೊಳ್ಳುವ ಪ್ರಯತ್ನ ನಡೆಸಲಿದ್ದೀರಿ. ವೃತ್ತಿರಂಗದಲ್ಲಿ ಮುಂಬಡ್ತಿಯ ಯೋಗವಿದೆ.