ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಭಾನುವಾರ, 21 ಫೆಬ್ರವರಿ 2021 (08:52 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಧಾರ್ಮಿಕ ಕ್ಷೇತ್ರದ ಭೇಟಿ ಯೋಗ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾಗಲಿದೆ. ಕಿರು ಓಡಾಟ ನಡೆಸಲಿದ್ದೀರಿ.
 
ವೃಷಭ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರಿಂದ ಕಿರಿ ಕಿರಿ ತಪ್ಪದು. ಸಾಮಾಜಿಕವಾಗಿ ಮನಸ್ಸಿಗೆ ನೆಮ್ಮದಿ ಕೊಡುವ ಕೆಲಸ ಮಾಡಲಿದ್ದಾರೆ. ಆರ್ಥಿಕವಾಗಿ ಧನಾದಾಯಕ್ಕೆ ಕೊರತೆಯಿರದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಇತಿ ಮಿತಿಯಿರಲಿ.
 
ಮಿಥುನ: ಶಿಕ್ಷಣ ರಂಗದಲ್ಲಿರುವವರಿಗೆ ಉನ್ನತಿಯ ಯೋಗವಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಅಧಿಕಗೊಳ್ಳಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.
 
ಕರ್ಕಟಕ: ಅಧಿಕಾರಿ ವರ್ಗದವರಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಕೌಟುಂಬಿಕವಾಗಿ ಜವಾಬ್ಧಾರಿ ಹೆಚ್ಚಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
 
ಸಿಂಹ: ವ್ಯಾವಹಾರಿಕವಾಗಿ ಮುನ್ನಡೆಯ ಯೋಗವಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸಣ್ಣ ವ್ಯಾಪಾರಿಗಳಿಗೆ ಮುನ್ನಡೆ ಯೋಗವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ.
 
ಕನ್ಯಾ: ಸಾಂಸಾರಿಕ ಜೀವನದಲ್ಲಿ ವಿರಸ ತೋರಿಬಂದೀತು. ಮೆಚ್ಚಿನ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ.
 
ತುಲಾ: ನೀವು ಮಾಡುವ ಕೆಲವೊಂದು ಕೆಲಸಗಳು ಆತ್ಮೀಯರ ಮುಖದಲ್ಲಿ ಸಂತೋಷ ತರಲಿದೆ. ಕಳೆದು ಹೋದ ವಸ್ತುವಿನ ಬಗ್ಗೆ ಚಿಂತೆ ಬೇಡ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.
 
ವೃಶ್ಚಿಕ: ದಾಂಪತ್ಯ ಜೀವನದಲ್ಲಿ ಹೊಂದಾಣಿಕೆಯಿಂದ ನಡೆದುಕೊಳ್ಳವುದು ಅಗತ್ಯ. ನಿಮ್ಮ ಕೆಲವೊಂದು ಮಾತುಗಳು ಪ್ರೀತಿ ಪಾತ್ರರ ಮನಸ್ಸಿಗೆ ನೋವುಂಟು ಮಾಡದಂತೆ ಎಚ್ಚರಿಕೆ ವಹಿಸಿ. ಕೃಷಿಕರಿಗೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.
 
ಧನು: ಕಾರ್ಯರಂಗದಲ್ಲಿ ನಿಮ್ಮ ಪ್ರಯತ್ನ ಬಲಕ್ಕೆ ತಕ್ಕ ಫಲ ದೊರೆಯಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಕಾರ್ಯಗಳು ವಿಳಂಬಗತಿಯಲ್ಲಿ ಸಾಗಿದರೂ ಅಂತಿಮವಾಗಿ ಯಶಸ್ಸು ಸಿಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
 
ಮಕರ: ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದೀತು. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.
 
ಕುಂಭ: ಕೌಟುಂಬಿಕವಾಗಿ ತಕ್ಕ ಮಟ್ಟಿಗಿನ ಸಮಾಧಾನವಿದ್ದರೂ ಅನಗತ್ಯ ಮಾತು, ವರ್ತನೆಗಳಿಗೆ ಕಡಿವಾಣ ಹಾಕುವುದು ಒಳಿತು. ಮನಸ್ಸಿಗೆ ಖುಷಿ ಕೊಡುವ ಕೆಲಸದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ.
 
ಮೀನ: ಬಹಳ ದಿನಗಳಿಂದ ಕಾಯುತ್ತಿದ್ದ ವ್ಯಕ್ತಿಯನ್ನು ಭೇಟಿಯಾಗಲಿದ್ದೀರಿ. ಕಾರ್ಯರಂಗದಲ್ಲಿ ಉನ್ನತ ಸಾಧನೆಗೆ ಯೋಜನೆ ರೂಪಿಸಲಿದ್ದೀರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.
ಇದರಲ್ಲಿ ಇನ್ನಷ್ಟು ಓದಿ :