ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬಿಡುವಿನ ವೇಳೆಯ ಸದುಪಯೋಗಪಡಿಸಿಕೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಗೆ ಚಾಲನೆ ನೀಡಿ. ಮಕ್ಕಳೊಂದಿಗೆ ಸಂತೋಷದ ಕ್ಷಣ ಕಳೆಯಲಿದ್ದೀರಿ. ಆರ್ಥಿಕವಾಗಿ ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ.ವೃಷಭ: ವೃತ್ತಿರಂಗದಲ್ಲಿ ನಾನಾ ರೀತಿಯ ಸಮಸ್ಯೆಗಳು ಎದುರಾದೀತು. ಆದರೆ ಅದನ್ನು ಬೇರೆಯವರ ಮೇಲೆ ತೋರಿಸಲು ಹೋಗಿ ಶಾಂತಿ ಹಾಳುಮಾಡಬೇಡಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಭಾಗ್ಯ ಕೂಡಿಬರಲಿದೆ.ಮಿಥುನ: ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಹಿರಿಯರಿಗೆ