ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಕೆಲವೊಂದು ಆದೇಶಗಳು ನಿಮ್ಮ ಅಸಹನೆ ಹೆಚ್ಚಿಸಲಿವೆ. ಕೆಲವೊಮ್ಮೆ ಇಷ್ಟವಿಲ್ಲದಿದ್ದರೂ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡುಬರಲಿದೆ.ವೃಷಭ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ದೈಹಿಕ, ಮಾನಸಿಕ ಆರೋಗ್ಯ ಹಾಳುಮಾಡಿಕೊಳ್ಳಬೇಡಿ. ಪ್ರೀತಿ ಪಾತ್ರರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಒಳಿತು.ಮಿಥುನ: ನೀವು ಹಿಂದೆ ಮಾಡಿದ ತಪ್ಪು ಏನೆಂದು ತಿಳಿದುಕೊಂಡು ಹೊಸ ಕೆಲಸಕ್ಕೆ