ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಿಯಾದ ನಿರ್ಧಾರ ಕೈಗೊಳ್ಳಲು ಯಾವುದೇ ಅಳುಕು ಬೇಕಾಗಿಲ್ಲ. ಬೇರೆಯವರು ನಿಮ್ಮ ಬಗ್ಗೆ ಏನು ತಿಳಿದುಕೊಳ್ಳುತ್ತಾರೋ ಎಂಬ ಹಿಂಜರಿಕೆ ಬಿಡಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಪ್ರಾಪ್ತಿಯಾಗಲಿದೆ.ವೃಷಭ: ವ್ಯಾವಹಾರಿಕವಾಗಿ ನಿಮಗೆ ಆಗುತ್ತಿರುವ ಅಡ್ಡಿ ಆತಂಕಗಳನ್ನು ನಿವಾರಿಸಲು ದಾರಿ ಹುಡುಕಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ಸಂಗಾತಿಯ ಪ್ರೀತಿಗೆ ಪಾತ್ರರಾಗಲಿದ್ದೀರಿ.ಮಿಥುನ: ಮನಸ್ಸಿನ ಭಾವನೆಗಳನ್ನು ಹತೋಟಿಯಲ್ಲಿಡಲು ಹರಸಾಹಸ