ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಲ್ಲವನ್ನೂ ಸಮಚಿತ್ತದಿಂದ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಿ. ಉದ್ಯೋಗ ಕ್ಷೇತ್ರದಲ್ಲಿ ತಾಳ್ಮೆಯಿಂದಿದ್ದಷ್ಟೂ ಉತ್ತಮ. ದುಡುಕಿನ ನಿರ್ಧಾರದಿಂದ ಅನಾಹುತವೇ ಹೆಚ್ಚು. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.ವೃಷಭ: ವ್ಯಾಪಾರ, ವ್ಯವಹಾರದಲ್ಲಿ ಮುನ್ನಡೆ ಗಳಿಸಬೇಕಾದರೆ ಕ್ರಿಯಾತ್ಮಕವಾಗಿ ಯೋಚಿಸಬೇಕಾದ ಅಗತ್ಯವಿದೆ. ಅನ್ಯರ ದೂಷಣೆಯಲ್ಲಿ ಕಾಲ ಹರಣ ಮಾಡಬೇಡಿ. ಯೋಗ್ಯ ವಯಸ್ಕರು ಉತ್ತಮ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗಬಹುದು.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬದಲಾವಣೆಗೆ ಮನಸ್ಸು ಬಯಸಲಿದೆ.