ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಶುಕ್ರವಾರ, 16 ಏಪ್ರಿಲ್ 2021 (08:25 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ನಿಮ್ಮ ಇಷ್ಟಾರ್ಥ ಸಿದ್ಧಿಗಾಗಿ ಬೇರೆಯವರ ಸಹಾಯ ಪಡೆದುಕೊಳ್ಳಲಿದ್ದೀರಿ. ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿಂದ ಚಿಂತೆಯಾಗುವುದು. ತಾಳ್ಮೆಯಿರಲಿ.
 
ವೃಷಭ: ಬಾಕಿ ಹಣ ಪಾವತಿ ಮಾಡುವ ಚಿಂತೆ ಕಾಡಲಿದೆ. ಆರ್ಥಿಕವಾಗಿ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಮನಸ್ಸಿಗೆ ಹಿಡಿಸಿದವರ ಜೊತೆ ಭಾವನೆ ಹಂಚಿಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
 
ಮಿಥುನ:ವ್ಯಾಪಾರೀ ವರ್ಗದವರಿಗೆ ಉನ್ನತ ವರ್ಗಕ್ಕೇರುವ ಅವಕಾಶಗಳು ತೋರಿಬರಲಿವೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಅಂದುಕೊಂಡಂತೇ ನೆರವೇರಲಿದೆ.
 
ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶ ಸ್ವಲ್ಪದರಲ್ಲೇ ತಪ್ಪಿ ಹೋಗಿ ನಿರಾಸೆಯಾದೀತು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
 
ಸಿಂಹ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬಂದೀತು. ವಯಸ್ಸಾದವರಿಗೆ ಆರೋಗ್ಯ ಸಮಸ್ಯೆ ಕಂಡುಬಂದೀತು. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ತಪ್ಪದು. ತಾಳ್ಮೆ ಅಗತ್ಯ.
 
ಕನ್ಯಾ: ಪ್ರೀತಿ ಪಾತ್ರರ ಅನಾರೋಗ್ಯ ಚಿಂತೆಗೆ ಕಾರಣವಾಗಲಿದೆ. ವೈಯಕ್ತಿಕವಾಗಿ ನಿಮಗೆ ಬೇಸರವಾಗುವಂತಹ ಘಟನೆಗಳು ನಡೆದೀತು. ಹಾಗಿದ್ದರೂ ಸಂಗಾತಿಯ ಸಹಕಾರ ನೆಮ್ಮದಿಕೊಡಲಿದೆ. ಮಕ್ಕಳಿಂದ ಸಂತೋಷ ಸಿಗುವುದು.
 
ತುಲಾ: ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಪ್ರೀತಿ ಪಾತ್ರರೊಂದಿಗೆ ಹೆಚ್ಚಿನ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಮನಸ್ಸಿನ ಭಾವನೆಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾದೀತು.
 
ವೃಶ್ಚಿಕ: ವೈಯಕ್ತಿಕ ಹಿತಾಸಕ್ತಿಗಳನ್ನು ಪ್ರೀತಿ ಪಾತ್ರರಿಗಾಗಿ ತ್ಯಾಗಮಾಡಬೇಕಾಗಿಬರಬಹುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸುವಿರಿ.
 
ಧನು: ವೃತ್ತಿರಂಗದಲ್ಲಿ ನಿಮಗೆ ತೊಡಕಾಗಿದ್ದವರಿಂದ ತೊಂದರೆಗಳು ಎದುರಾದೀತು. ನೆರೆಹೊರೆಯವರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆ ಅಗತ್ಯ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.
 
ಮಕರ: ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗುವುದು. ಪ್ರೇಮಿಗಳ ಗುಟ್ಟು ಮನೆಯವರೆದುರು ಬಯಲಾಗಲಿದೆ. ವ್ಯಾಪಾರೀ ವರ್ಗದವರಿಗೆ ಮುನ್ನಡೆಯ ಯೋಗವಿದೆ. ದೇವತಾ ಪ್ರಾರ್ಥನೆ ಮಾಡಿ.
 
ಕುಂಭ: ಇನ್ನೊಬ್ಬರಿಗೆ ಸಾಂತ್ವನ ಹೇಳುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನಕ್ಕೇರುವ ಯೋಗ ನಿಮ್ಮದಾಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ದತೆ ನಡೆಸಲಿದ್ದೀರಿ.
 
ಮೀನ: ಕಾರ್ಯಕ್ಷೇತ್ರದಲ್ಲಿ ಉತ್ಸಾಹದಿಂದ ತೊಡಗಿಸಿಕೊಳ್ಳಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗವಿದೆ. ಧಾರ್ಮಿಕ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ಸಿಕ್ಕೀತು. ವಾಹನ ಸಂಚಾರದಲ್ಲಿ ಎಚ್ಚರಿಕೆಯಿರಲಿ
ಇದರಲ್ಲಿ ಇನ್ನಷ್ಟು ಓದಿ :