ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೀವು ಅನವಶ್ಯಕವಾಗಿ ಆಡುವ ಮಾತಿಗೆ ನೀವೇ ಹೊಣೆಯಾಗಬೇಕಾಗುತ್ತದೆ. ಕೌಟುಂಬಿಕವಾಗಿ ಸಾಮರಸ್ಯ ಕಾಪಾಡಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಹಣಕಾಸಿನ ಹರಿವಿಗೆ ತೊಂದರೆಯಿರದು.ವೃಷಭ: ಮನಸ್ಸಿಗೆ ಹಿತವೆನಿಸುವವರ ಜೊತೆ ಮುಕ್ತವಾಗಿ ಬೆರೆಯಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡಿದ್ದ ಕೆಲಸಗಳು ನೆರವೇರಲಿವೆ.ಮಿಥುನ: ಬೇರೆಯವರು ನಿಮ್ಮ ಬಗ್ಗೆ ಏನು ಹೇಳುತ್ತಾರೋ ಎಂಬ ಅತಿಯಾದ ಯೋಚನೆ ಬೇಡ. ಮಾನಸಿಕವಾಗಿ