ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರಿ ವರ್ಗದವರಿಗೆ ಸಾಕಷ್ಟು ಪ್ರಗತಿ ಕಂಡುಬರಲಿದೆ. ಚಿಂತಿತ ಕಾರ್ಯಗಳನ್ನು ನೆರವೇರಿಸಲಿದ್ದೀರಿ. ಹಿರಿಯರ ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಗೆ ಕೌಟುಂಬಿಕ ವಿಚಾರದಲ್ಲಿ ಚಿಂತೆಯಾದೀತು.ವೃಷಭ: ಹಣಕಾಸಿನ ಪರಿಸ್ಥಿತಿ ನಿಮ್ಮನ್ನು ಚಿಂತೆಗೀಡುಮಾಡಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಕೆಲವು ದಿನ ಕಾಯುವುದು ಒಳಿತು. ತಾಳ್ಮೆಯಿರಲಿ.ಮಿಥುನ: ವೃತ್ತಿರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಎಚ್ಚರಿಕೆಯಿಂದ ನಿಭಾಯಿಸಬೇಕಾದೀತು.