ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಗೇರುವ ನಿಮ್ಮ ಕನಸು ನನಸಾಗಿಸಲು ಸಕಲ ಪ್ರಯತ್ನ ನಡೆಸಲಿದ್ದೀರಿ. ಕೌಟುಂಬಿಕವಾಗಿ ತಾಳ್ಮೆಯೇ ನಿಮ್ಮ ಅಸ್ತ್ರವಾಗಲಿದೆ. ಗೃಹೋಪಯೋಗಿ ವಸ್ತುಗಳಿಗಾಗಿ ಖರ್ಚು ವೆಚ್ಚಗಳಾದೀತು.ವೃಷಭ: ಮನೆಯಲ್ಲಿ ನೆಮ್ಮದಿಯ ವಾತಾವರಣವಿದ್ದರೂ ಋಣಾತ್ಮಕ ಯೋಚನೆಗಳಿಂದ ನಿರುತ್ಸಾಹ ಕಂಡುಬರಲಿದೆ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತಿಸಲಿದ್ದಾರೆ.ಮಿಥುನ: ನಿಮ್ಮ ಕೆಲಸವಾಗಬೇಕಾದರೆ ಕತ್ತೆ ಕಾಲಾದರೂ