ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 21 ಜುಲೈ 2021 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ನಿಮ್ಮ ಕೆಲವೊಂದು ನಿರ್ಧಾರಗಳು ಇತರರಿಗೆ ಕಿರಿ ಕಿರಿಯೆನಿಸಲಿದೆ. ಯಾವುದೇ ವಿಚಾರಗಳನ್ನೂ ಸಂಗಾತಿಯೊಂದಿಗೆ ಹಂಚಿಕೊಳ್ಳುವುದು ಸೂಕ್ತ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ವೃಷಭ: ಬಹುದಿನಗಳಿಂದ ಕಾಡುತ್ತಿದ್ದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
 
ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ವೈಮನಸ್ಯವೇರ್ಪಡಲಿದೆ. ಹಿರಿಯರ ಸಲಹೆಗಳನ್ನು ಪಾಲಿಸಿದಲ್ಲಿ ಉತ್ತಮ. ವಿದ್ಯಾರ್ಥಿಗಳಿಗೆ ಕಠಿಣ ಸವಾಲುಗಳು ಎದುರಾಗಲಿವೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.
 
ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಎದುರಾಳಿಗಳ ಮುಂದೆ ಗೆದ್ದು ಬೀಗುವ ಕ್ಷಣಗಳು ಎದುರಾಗಲಿದೆ. ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆಯ ಯೋಗವಿದೆ. ಹಳೆಯ ಮಿತ್ರರನ್ನು ಭೇಟಿಯಾಗುವ ಯೋಗವಿದೆ.
 
ಸಿಂಹ: ನಿಮಗೆ ಇಷ್ಟವಿಲ್ಲದಿದ್ದರೂ ಕೆಲವೊಂದು ಕೆಲಸಗಳನ್ನು ಅನಿವಾರ್ಯವಾಗಿ ಮಾಡಬೇಕಾಗುತ್ತದೆ. ಆರ್ಥಿಕವಾಗಿ ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದ್ದು, ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.
 
ಕನ್ಯಾ: ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಕಷ್ಟದಲ್ಲಿರುವಾಗ ಸ್ನೇಹಿತರಿಂದ ಸಹಾಯ ಒದಗಿಬರಲಿದೆ. ನಿಮ್ಮ ವಿಚಾರಧಾರೆಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ.
 
ತುಲಾ: ಇಷ್ಟಮಿತ್ರರೊಂದಿಗೆ ಪ್ರವಾಸ, ಭೋಜನ ಯೋಗ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕಾಗಿ ಪರವೂರಿಗೆ ಪ್ರಯಾಣ ಬೆಳೆಸಬೇಕಾದೀತು. ಕೃಷಿಕರಿಗೆ ವ್ಯವಹಾರಕ್ಕೆ ತೊಡಕುಂಟಾದೀತು. ತಾಳ್ಮೆಯಿಂದಿರಿ.
 
ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ.
 
ಧನು: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಿಲ್ಲದಿದ್ದರೂ, ನಷ್ಟವಾಗದು. ಕುಲದೇವರ ಪ್ರಾರ್ಥನೆ ಮಾಡಿ.
 
ಮಕರ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತಾಧಿಕಾರದ ಯೋಗ ಕೂಡಿಬರಲಿದೆ. ನಿಮ್ಮದಲ್ಲದ ತಪ್ಪಿಗೆ ಬೆಲೆ ತೆರುವ ಸಂದರ್ಭ ಬಂದೀತು. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದ್ದು, ಸಂಭ್ರಮದ ವಾತಾವರಣವಿರಲಿದೆ.
 
ಕುಂಭ: ವೃತ್ತಿರಂಗದಲ್ಲಿ ಶತ್ರುಭಯ ತೋರಿಬರಲಿದೆ. ತಾಳ್ಮೆ, ಸಂಯಮದಿಂದ ಯೋಚಿಸಿದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಲಿದ್ದೀರಿ.
 
ಮೀನ: ಇತರರ ಕಷ್ಟಕ್ಕೆ ನೆರವಾಗುವ ನಿಮ್ಮ ಗುಣವೇ ಕೆಲವೊಮ್ಮೆ ಶತ್ರುವಾದೀತು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.
ಇದರಲ್ಲಿ ಇನ್ನಷ್ಟು ಓದಿ :