ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಗುರುವಾರ, 22 ಜುಲೈ 2021 (08:36 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮಕ್ಕಳ ವಿದ್ಯಾಭ್ಯಾಸದ ವಿಚಾರದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ಅನಗತ್ಯವಾಗಿ ಸಂಶಯ ಪಡುವ ಗುಣದಿಂದ ಸಂಬಂಧ ಹಾಳಾದೀತು.
 
ವೃಷಭ: ನಿಮ್ಮ ಅತಿಯಾದ ವಿಶ್ವಾಸವೇ ನಿಮಗೆ ಮುಳುವಾಗಲಿದೆ. ವೃತ್ತಿರಂಗದಲ್ಲಿ ಕ್ರಿಯಾತ್ಮಕವಾಗಿ ಯೋಚನೆ ಮಾಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.
 
ಮಿಥುನ: ಮಾತಿನ ಮೇಲೆ ನಿಗಾ ಇರದೇ ಹೋದಲ್ಲಿ ಆತ್ಮೀಯರ ಜೊತೆಗೆ ಭಿನ್ನಾಭಿಪ್ರಾಯಗಳಾದೀತು. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಚೇತರಿಕೆಯ ವಾತಾವರಣ ಕಂಡುಬರಲಿದೆ. ಸರಕಾರಿ ಲೆಕ್ಕಪತ್ರಗಳನ್ನು ಜೋಪಾನ ಮಾಡಿಕೊಳ‍್ಳಿ.
 
ಕರ್ಕಟಕ: ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಇನ್ನೊಬ್ಬರ ಭಾವನೆಗಳಿಗೆ ಬೆಲೆಕೊಟ್ಟು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ.
 
ಸಿಂಹ: ವ್ಯಾವಹಾರಿಕವಾಗಿ ನಿಮಗೆ ಅಡ್ಡಿ ಉಂಟು ಮಾಡುತ್ತಿರುವವರ ಬಗ್ಗೆ ಎಚ್ಚರಿಕೆಯಿಂದಿರಬೇಕು. ಹಿತಶತ್ರುಗಳ ನಯವಾದ ಮಾತುಗಳಿಗೆ ಬಲಿಯಾಗದಿರಿ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ.
 
ಕನ್ಯಾ: ಸಂಗಾತಿಯ ಸಂತೋಷಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳಾಗಬಹುದು. ಆತ್ಮೀಯರ ಭೇಟಿಯಿಂದ ಮನಸ್ಸಿಗೆ ಸಂತೋಷ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ತುಲಾ: ನಿಮ್ಮ ಮನಸ್ಸಿನ ಭಾವನೆಗಳನ್ನು ಆತ್ಮೀಯರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸಲು ಹೋಗಿ ಕಷ್ಟಕ್ಕೆ ಸಿಲುಕಬೇಡಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.
 
ವೃಶ್ಚಿಕ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯಕ್ಕೆ ಯೋಜನೆ ಹಾಕಿಕೊಳ್ಳಲಿದ್ದೀರಿ. ಹಿರಿಯರಿಗೆ ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
 
ಧನು: ಇಷ್ಟಮಿತ್ರರೊಂದಿಗೆ ಪ್ರವಾಸ, ಇಷ್ಟ ಭೋಜನ ಮಾಡುವ ಯೋಗ ಕೂಡಿಬರುವುದು. ಹಿರಿಯರ ಮಾತುಗಳು ಅಪಥ್ಯವೆನಿಸಬಹುದು. ನೂತನ ದಂಪತಿಗಳು ಮೂರನೆ ವ್ಯಕ್ತಿಗಳ ಪ್ರವೇಶಕ್ಕೆ ಅವಕಾಶ ಕೊಡಬೇಡಿ.
 
ಮಕರ: ಎಷ್ಟೋ ದಿನಗಳಿಂದ ಬಾಕಿಯಿದ್ದ ನಿಮ್ಮ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಸರಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ನಿರೀಕ್ಷಿತ ಫಲ ಸಿಗಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.
 
ಕುಂಭ: ಅನಿರೀಕ್ಷಿತ ರೀತಿಯಲ್ಲಿ ನಿಮ್ಮ ಕೆಲಸ ನಡೆದುಹೋಗಲಿದೆ. ಸಂಗಾತಿಯ ಮಾತುಗಳು ಅಸಹನೆಯುಂಟು ಮಾಡೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.
 
ಮೀನ: ನಿಮ್ಮ ಬಹುದಿನಗಳ ಕಷ್ಟಕ್ಕೆ ತಕ್ಕ ಫಲ ಸಿಗಲಿದೆ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ. ನಿಮ್ಮ ಮೆಚ್ಚಿನ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಇದರಲ್ಲಿ ಇನ್ನಷ್ಟು ಓದಿ :