ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಹಿಂದೆ ಆದ ಬೇಸರದ ವಿಚಾರಗಳನ್ನು ಮರೆತು ಮುನ್ನಡೆಯಬೇಕಾದ ಅನಿವಾರ್ಯತೆ ಎದುರಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು.ವೃಷಭ: ಯಾವುದೇ ವಿಚಾರವಾದರೂ ಹಿಂದೆ ಮುಂದೆ ಯೋಚಿಸದೇ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆ ಎದುರಿಸಬೇಕಾದೀತು. ಸಂಗಾತಿಯ ಮಾತಿಗೆ ಕಿವಿಗೊಡಬೇಕಾಗುತ್ತದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.ಮಿಥುನ: ಆರ್ಥಿಕವಾಗಿ ಕೈಗೊಳ್ಳಬೇಕಾಗಿದ್ದ ಯೋಜನೆಗಳು ಅರ್ಧಕ್ಕೇ ಸ್ಥಗಿತವಾಗಲಿದೆ. ಹೊಸ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ