ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವೃತ್ತಿರಂಗದಲ್ಲಿ ನಿಮ್ಮ ಸಮಯೋಚಿತ ಕೆಲಸದಿಂದ ಸಂಭಾವ್ಯ ಸಮಸ್ಯೆಗಳು ದೂರವಾಗಲಿದ್ದು, ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಮಾನಹಾನಿಯಾಗುವ ಘಟನೆಗಳು ನಡೆದೀತು. ಎಚ್ಚರಿಕೆಯಿಂದ ವರ್ತಿಸಿ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಉತ್ತಮ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ನಿಮ್ಮ ಮನಸ್ಸಿನಲ್ಲಿ ನಡೆಯುತ್ತಿರುವ ಗೊಂದಲಗಳಿಗೆ ಉತ್ತರ