ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಅದೃಷ್ಟವಶಾತ್ ಇಂದು ನೀವು ಅಂದುಕೊಂಡ ಕೆಲಸಗಳು ನೆರವೇರಲಿದೆ. ಬೇರೆಯವರು ನಿಮ್ಮ ಬಗ್ಗೆ ಹೇಳುವ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಮಕ್ಕಳ ವಿದ್ಯಾಭ್ಯಾಸ ನಿಮಿತ್ತ ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ.ವೃಷಭ: ಹಲವು ವ್ಯವಹಾರಗಳನ್ನು ಮೈಮೇಲೆಳೆದುಕೊಂಡರೆ ಗೊಂದಲಗಳೇ ಜಾಸ್ತಿಯಾಗುವುದು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಿರು ಸಂಚಾರ ಮಾಡಲಿದ್ದೀರಿ.ಮಿಥುನ: ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂತೋಷ