ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮಗಿರುವ ಸವಾಲುಗಳನ್ನು ಎದುರಿಸಿ ನಿಲ್ಲುವ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ವ್ಯಾವಹಾರಿಕವಾಗಿ ಲಾಭ ಕಂಡುಬಂದರೂ ಹಿತಶತ್ರುಗಳ ಕಾಟ ತಪ್ಪದು. ತಾಳ್ಮೆ ಸಂಯಮವಿರಲಿ.ವೃಷಭ: ನಿಮ್ಮ ಭವಿಷ್ಯದ ಜೀವನಕ್ಕೆ ಬೇಕಾದ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಸಂಗಾತಿಯೊಂದಿಗೆ ಪರಾಮರ್ಶಿಸಿ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಕಾಳಜಿಯಿರಲಿ.ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳಾದೀತು. ಎಚ್ಚರಿಕೆಯಿಂದ ವರ್ತಿಸಿ. ಮಾತಿನ ಮೇಲೆ ನಿಗಾ ಇರಲಿ.