ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೂತನ ಕೆಲಸಗಳಿಗೆ ಕೈ ಹಾಕಲು ಕೆಲವು ದಿನ ಕಾಯುವುದು ಒಳ್ಳೆಯದು. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಪ್ರೀತಿ ಪಾತ್ರರನ್ನು ಭೇಟಿಯಾಗಲು ಮನಸ್ಸು ಹಾತೊರೆಯಲಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗುವುದು. ಯಂತ್ರೋಪಕರಣಗಳ ವೃತ್ತಿಯಲ್ಲಿರುವವರಿಗೆ ಮುನ್ನಡೆಯ ಯೋಗವಿದೆ.ಮಿಥುನ: ನಿಮ್ಮ ಮಾತಿನಿಂದಲೇ ಇಂದು ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ.