ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನಸ್ಸಿನಲ್ಲಿ ಒಂದು ರೀತಿಯ ಬೇಸರದ ಛಾಯೆ ಇರುವುದು. ನೀವು ಅಂದುಕೊಂಡ ರೀತಿಯಲ್ಲಿ ಕೆಲಸಗಳು ನಡೆಯುತ್ತಿಲ್ಲ ಎಂಬ ನೋವು ಕಾಡಲಿದೆ. ಆಪ್ತರೊಂದಿಗೆ ದುಃಖ ಹಂಚಿಕೊಂಡು ಹಗುರವಾಗಲಿದ್ದೀರಿ.ವೃಷಭ: ಹಿಂದೆ ಹೂಡಿಕೆ ಮಾಡಿದ್ದ ಯೋಜನೆಗಳು ಇಂದು ಫಲ ಕೊಡಲಿವೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ