ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸರಕಾರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಮಾಜಿಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಮಕ್ಕಳ ಸಾಧನೆ ಮನಸ್ಸಿಗೆ ತೃಪ್ತಿ ನೀಡಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.ವೃಷಭ: ದೈಹಿಕವಾಗಿ ನಿಮ್ಮ ಆರೋಗ್ಯ ಸ್ಥಿತಿಗೆ ಪರಿಹಾರ ಕಂಡುಕೊಂಡರೂ ಮಾನಸಿಕವಗಿ ಋಣಾತ್ಮಕ ಚಿಂತನೆಗಳಿಂದ ಬೇಸರಕ್ಕೊಳಗಾಗುವಿರಿ. ಆಸ್ತಿ ವ್ಯವಹಾರದಲ್ಲಿ ಲಾಭ-ನಷ್ಟ ಸಮನಾಗಿರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಆರ್ಥಿಕವಾಗಿ ಚೇತರಿಕೆ ಕಂಡುಬರಲಿದ್ದು, ಮನಸ್ಸಿಗೆ ನೆಮ್ಮದಿಯಾಗಲಿದೆ.