ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಇಷ್ಟಮಿತ್ರರ ಭೇಟಿ ಮನಸ್ಸಿಗೆ ಖುಷಿ ಕೊಡಲಿದೆ. ಆರ್ಥಿಕವಾಗಿ ಬರಬೇಕಾದ ಬಾಕಿ ಹಣ ಪಾವತಿಯಾಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ.ವೃಷಭ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಬೆನ್ನ ಹಿಂದೆ ಚೂರಿ ಹಾಕುವವರಿರುತ್ತಾರೆ. ಎಚ್ಚರಿಕೆಯ ಹೆಜ್ಜೆಯಿಡಬೇಕು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆಯಿಂದಿರಿ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ.ಮಿಥುನ: ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ವಿದ್ಯಾರ್ಥಿಗಳಿಗೆ ಅನುಕೂಲಕರ