ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಲವಾರು ಮಾನಸಿಕ ತೊಳಲಾಟದಿಂದ ನೆಮ್ಮದಿಯಲ್ಲದಂತಾಗುವುದು. ಆಪ್ತರೊಂದಿಗೆ ಮನಸ್ಸಿನ ಭಾವನೆ ಹಂಚಿಕೊಳ್ಳುವುದು ಸೂಕ್ತ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ.ವೃಷಭ: ಭೂ ಸಂಬಂಧೀ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಪ್ರಗತಿ ಕಂಡುಬರಲಿದ್ದು, ಮನಸ್ಸಿಗೆ ಸಂತೋಷವಾಗಲಿದೆ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧರಾಗಿ. ದಿನದಂತ್ಯಕ್ಕೆ ಸಂತೋಷದ ಸುದ್ದಿ.ಮಿಥುನ: ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಪ್ರತಿಷ್ಠೆ, ಗೌರವ ಹೆಚ್ಚಾಗಲಿದೆ.