ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳನ್ನು ಮೆಟ್ಟಿನಿಲ್ಲುವ ಧೈರ್ಯ ಮೈಗೂಡಿಸಲಿದ್ದೀರಿ. ಆರ್ಥಿಕವಾಗಿ ಹೊಸ ಯೋಜನೆಗಳಿಗೆ ಕೈ ಹಾಕಲಿದ್ದೀರಿ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ತಾಳ್ಮೆಯಿರಲಿ.ವೃಷಭ: ವೃತ್ತಿರಂಗದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಜನಮನ್ನಣೆ ಸಿಗಲಿದೆ. ವಾಹನ, ಭೂಮಿ ಖರೀದಿ ವ್ಯವಹಾರದಲ್ಲಿ ಲಾಭವಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ.ಮಿಥುನ: ವ್ಯಾಪಾರ, ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ.