ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಬುದ್ಧಿವಂತಿಕೆಯ ನಡೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಮಾತಿನ ಮೇಲೆ ನಿಗಾ ಇರಲಿ. ದೇವತಾ ಪ್ರಾರ್ಥನೆ ಮಾಡಿ.ವೃಷಭ: ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ವಾಹನ, ಭೂಮಿ ಖರೀದಿ ವಿಚಾರದಲ್ಲಿ ಲಾಭವಾಗಲಿದೆ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ