ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಬೇಡದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದನ್ನು ಬಿಟ್ಟು ಕಾರ್ಯಪ್ರವೃತ್ತರಾಗಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಇಷ್ಟದೇವತೆಗಳ ಪ್ರಾರ್ಥನೆಯಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆಯಾಗುವುದು.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಅನಿವಾರ್ಯವಾಗಿ ಮೇಲಧಿಕಾರಿಗಳ ಸೂಚನೆಗಳನ್ನು ಪಾಲಿಸಬೇಕಾಗುತ್ತದೆ. ಭವಿಷ್ಯದ ದೃಷ್ಟಿಯಿಂದ ಆರ್ಥಿಕ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ.ಮಿಥುನ: ಬಯಸದೇ ಕೆಲವೊಂದು ಭಾಗ್ಯ ನಿಮ್ಮ ಪಾಲಿಗೆ ಒಲಿಯಲಿದೆ. ಸಂಗಾತಿಯ ಪ್ರೀತಿ-ಆದರಗಳಿಗೆ ಪಾತ್ರರಾಗಲಿದ್ದೀರಿ. ನೂತನ ದಂಪತಿಗಳಿಗೆ ಪ್ರವಾಸ ಯೋಗ. ವಾಹನ