ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸರಕಾರಿ ಕೆಲಸಗಳಲ್ಲಿ ಪ್ರಗತಿ ನಿರೀಕ್ಷಿಸಬಹುದು. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕಳೆದು ಹೋದ ಘಟನೆಗಳ ಬಗ್ಗೆ ಚಿಂತಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶಗಳು ಎದುರಾಗಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ಸಿಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷಕ್ಕೆ ದಾರಿ ಮಾಡಬೇಡಿ.ಮಿಥುನ: ನೆರೆಹೊರೆಯವರು ನಿಮ್ಮ ಗುಟ್ಟುಗಳನ್ನು