ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮಹಿಳೆಯರಿಂದ ನಿಮಗೆ ಒಳಿತಾಗಲಿದೆ. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯಗಳು ಕಂಡುಬಂದರೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಉದ್ಯೋಗ ವ್ಯವಹಾರದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ಕೊಡದಿರಿ. ದಿನದಂತ್ಯಕ್ಕೆ ನೆಮ್ಮದಿ.ವೃಷಭ: ಮಾನಸಿಕವಾಗಿ ಒಂದು ರೀತಿಯ ಗೊಂದಲ, ನಿರುತ್ಸಾಹ ಕಾಡಲಿದೆ. ಆಪ್ತರೊಂದಿಗೆ ಮನಸ್ಸು ಬಿಚ್ಚಿ ಮಾತನಾಡಿರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ವಾಕ್ಚತುರತೆಯಿಂದ ಸಮಸ್ಯೆಗಳಿಂದ ಬಗೆಹರಿಸಿ.ಮಿಥುನ: ಯೋಗ್ಯ ವಯಸ್ಕರಿಗೆ ಹೇಳಿ ಮಾಡಿಸಿದಂತಹ ವೈವಾಹಿಕ ಪ್ರಸ್ತಾಪಗಳು ಬರಲಿವೆ.