ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅತಿಯಾದ ನಿರೀಕ್ಷೆಗಳು ನಿರಾಸೆ ತಂದೀತು. ಕಾರ್ಯದೊತ್ತಡದಲ್ಲಿ ವೈಯಕ್ತಿಕ ಕೆಲಸಗಳನ್ನು ಮರೆಯಬೇಡಿ. ಆಪ್ತರನ್ನು ಭೇಟಿಯಾಗುವ ಯೋಗವಿದೆ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ.ವೃಷಭ: ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಭೂಮಿ, ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಧಾರ್ಮಿಕ ಶ್ರದ್ಧೆ ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿಗಾಗಿ ದೇವತಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದೀರಿ.ಮಿಥುನ: ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ವೃತ್ತಿರಂಗದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಉದ್ಯೋಗ