ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವ್ಯವಹಾರದಲ್ಲಿ ಪಾರದರ್ಶಕತೆಗೆ ಅದ್ಯತೆ ನೀಡಿ. ನಿಮ್ಮ ಮನಸ್ಸಿನಲ್ಲಿರುವ ಭಾವನೆಗಳನ್ನು ಪ್ರೀತಿ ಪಾತ್ರರೊಂದಿಗೆ ಹಂಚಿಕೊಳ್ಳಲಿದ್ದೀರಿ. ಬಾಕಿ ಹಣ ವಸೂಲಾತಿ ಚಿಂತೆ ಕಾಡಲಿದೆ. ಸಾಂಸಾರಿಕವಾಗಿ ತಾಳ್ಮೆಯಿಂದ ವ್ಯವಹರಿಸಿ.ವೃಷಭ: ಎಷ್ಟೇ ಹಣ ಸಂಪಾದನೆ ಮಾಡಿದರೂ ಏನೋ ಒಂದು ಅತೃಪ್ತಿ ಕಾಡಲಿದೆ. ಕಾರ್ಯರಂಗದಲ್ಲಿ ನಿರೀಕ್ಷಿತ ಮುನ್ನಡೆಯಿರಲಿದೆ. ಆತ್ಮೀಯರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ.