ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಹಿರಿಯರಿಂದ ನಿಮ್ಮ ಮನೋವೇದನೆಗೆ ಪರಿಹಾರ ಸಿಗಲಿದೆ. ನಿಮ್ಮ ಕೆಲಸಗಳಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ.ವೃಷಭ: ಎಷ್ಟೋ ದಿನಗಳಿಂದ ಬಾಕಿಯಿದ್ದ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ವ್ಯಾವಹಾರಿಕವಾಗಿ ಮುನ್ನಡೆಯ ದಿನಗಳಿವು.ಮಿಥುನ: ಹೆಚ್ಚಿನ ಧನಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ