ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆಯಿದೆ. ಕೃಷಿಕರಿಗೆ ಮುನ್ನಡೆಯ ಯೋಗವಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.ವೃಷಭ: ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯ ಸರಾಗವಾಗಿ ನೆರವೇರಲಿದೆ. ನಿರೀಕ್ಷಿತ ಆದಾಯ ಕೈಗೆ ಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಲಿದೆ.ಮಿಥುನ: ಮನೆಯಲ್ಲಿ ಹೆಚ್ಚಿನ ಜವಾಬ್ಧಾರಿಯು ಹೆಗಲಿಗೇರಲಿದ್ದು, ತಾಳ್ಮೆಯಿಂದ ವ್ಯವಹರಿಸಬೇಕಾಗುತ್ತದೆ. ಗುರುಹಿರಿಯರಿಂದ