ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಹಂತಕ್ಕೇರುವ ಕನಸು ಸದ್ಯದಲ್ಲೇ ನನಸಾಗಲಿದೆ. ಎಷ್ಟೋ ದಿನಗಳ ನಂತರ ಪ್ರೀತಿ ಪಾತ್ರರ ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಆದರೂ ಸಾಂಸಾರಿಕವಾಗಿ ಕೆಲವೊಂದು ಸಂಘರ್ಷಗಳಾದೀತು.ವೃಷಭ: ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವ ಯೋಗ ನಿಮ್ಮದಾಗಲಿದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಇಷ್ಟದೇವತಾ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಎಲ್ಲವೂ ಶುಭವಾಗಲಿದೆ.ಮಿಥುನ: ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿನ ದುಃಖ ಮರೆಯಬಹುದು.