ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನಿಮ್ಮ ಪರಿಶ್ರಮದ ಫಲ ಇನ್ನೊಬ್ಬರ ಪಾಲಾದೀತು. ಮನಸ್ಸಿಗೆ ಬೇಸರ ಮಾಡಿಕೊಳ್ಳದೇ ಕರ್ತವ್ಯದ ಕಡೆಗೆ ಗಮನ ಕೊಡಿ. ಸಾಂಸಾರಿಕವಾಗಿ ಗಂಡ-ಹೆಂಡಿರ ನಡುವೆ ಸಂಘರ್ಷಗಳಾದೀತು. ತಾಳ್ಮೆ, ಸಂಯಮ ಅಗತ್ಯ.ವೃಷಭ: ಮನೆಗೆ ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದೆ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬಗ್ಗೆ ಚಿಂತನೆ ನಡೆಸಲಿದ್ದೀರಿ.ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಮಾನ ಹೆಚ್ಚಿಸಲು ಪ್ರಯತ್ನ ಮಾಡಲಿದ್ದೀರಿ. ಪ್ರೇಮಿಗಳು