ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಸೋಮವಾರ, 22 ನವೆಂಬರ್ 2021 (08:38 IST)
ಬೆಂಗಳೂರು: ಇಂದಿನ
ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸುದೀರ್ಘ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಉದ್ಯೋಗ ಕ್ಷೇತ್ರದಲ್ಲಿ ಪಾರದರ್ಶಕ ವ್ಯವಹಾರಕ್ಕೆ ಗಮನ ಕೊಡಿ. ಗೃಹೋಪಯೋಗಿ ವಸ್ತುಗಳಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ವೃಷಭ: ನಿಮ್ಮ ಗೌರವಕ್ಕೆ ಧಕ್ಕೆಯಾಗುವ ಪರಿಸ್ಥಿತಿಯಿಂದ ದೂರವಿರುವುದು ಉತ್ತಮ. ಧಾರ್ಮಿಕ ಚಟುವಟಿಕೆಗಳಿಗೆ ಖರ್ಚುವೆಚ್ಚಗಳಾದೀತು. ಹಿರಿಯರ ದೇಹಾರೋಗ್ಯದಲ್ಲಿ ಸಣ್ಣ ಪುಟ್ಟ ಏರುಪೇರಾದರೂ ಚಿಂತೆ ಬೇಡ.


ಮಿಥುನ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗಿ ಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಇಷ್ಟಮಿತ್ರರ ಭೇಟಿ ಯೋಗವಿದ್ದು, ಇಷ್ಟ ಭೋಜನ ಸವಿಯಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಕಂಡುಬರಲಿದೆ.


ಕರ್ಕಟಕ: ಅಧ್ಯಯನ ಕ್ಷೇತ್ರದಲ್ಲಿ ತೊಡಗಿಸಿಕೊಂಡವರಿಗೆ ಹೊಸ ವಿಚಾರಗಳನ್ನು ತಿಳಿಯುವ ಯೋಗ. ಗೃಹಿಣಿಯರಿಗೆ ಗೃಹಕೃತ್ಯಗಳ ಸಂದರ್ಭಗಳಲ್ಲಿ ತೊಂದರೆಗಳು ಎದುರಾದೀತು. ಧಾರ್ಮಿಕ ಶ್ರದ್ಧೆ ಹೆಚ್ಚಾಗಲಿದೆ.

ಸಿಂಹ: ಸಂದರ್ಭಕ್ಕೆ ತಕ್ಕಂತೆ ನಿರ್ಧಾರಗಳನ್ನು ತೆಗೆದುಕೊಳ್ಳುವುದರಿಂದ ಮನಸ್ಸಿನ ಭಾರ ಕಡಿಮೆಯಾಗಲಿದೆ. ಸಂಗಾತಿಯ ಬಹುದಿನಗಳ ಆಸೆ ನೆರವೇರಿಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.


ಕನ್ಯಾ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಕೂರುವುದರಲ್ಲಿ ಅರ್ಥವಿಲ್ಲ. ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿ. ಯಾರಿಗೂ ಇಂದು ಸಾಲ ಕೊಡಲು ಹೋಗಬೇಡಿ. ವ್ಯವಹಾರದಲ್ಲಿ ಎಚ್ಚರಿಕೆಯಿರಲಿ.


ತುಲಾ: ವೃತ್ತಿರಂಗದಲ್ಲಿ ನಿಮ್ಮ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷಕ್ಕೆ ಕಾರಣ ಮಾಡಿಕೊಡದಿರಿ. ಆರ್ಥಿಕವಾಗಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಪ್ರೀತಿ ಪಾತ್ರರ ಹಿತವಚನಗಳು ಉಪಯೋಗಕ್ಕೆ ಬರಲಿವೆ.

ವೃಶ್ಚಿಕ: ಎಂದೋ ಮಾಡಿದ ತಪ್ಪಿಗೆ ಪಶ್ಚಾತ್ತಾಪ ಪಡುತ್ತಾ ಕೂರುವದರಲ್ಲಿ ಅರ್ಥವಿಲ್ಲ. ನಿಮ್ಮಿಂದ ನಾಲ್ಕು ಜನರಿಗೆ ಉಪಯೋಗವಾಗುವ ಕೆಲಸ ಮಾಡಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.


ಧನು: ವ್ಯಾವಹಾರಿಕವಾಗಿ ಕೆಲವು ಅಡೆತಡೆಗಳು ಬಂದರೂ ಅಂತಿಮ ಜಯ ನಿಮ್ಮದಾಗುವುದು. ಮಂಗಲ ವಸ್ತು ಖರೀದಿ ಯೋಗ ನಿಮ್ಮದಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದ್ದು, ನಿರಾಳವಾಗಲಿದೆ.


ಮಕರ: ನಿರುದ್ಯೋಗಿಗಳಿಗೆ ಸೂಕ್ತ ಉದ್ಯೋಗ ಸಿಗದೇ ನಿರಾಶೆಯಾದೀತು. ಸ್ವಯಂ ವೃತ್ತಿಯವರಿಗೆ ಆಶಾದಾಯಕ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.

ಕುಂಭ: ನಿಮ್ಮ ಪ್ರೀತಿ ಪಾತ್ರರಿಂದ ಅಚ್ಚರಿಯ ಉಡುಗೊರೆಗಳನ್ನು ನಿರೀಕ್ಷಿಸಬಹುದು. ವೈಯಕ್ತಿಕ ಸಮಸ್ಯೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ನೆರೆಹೊರೆಯವರೊಂದಿಗೆ ವೈಮನಸ್ಯಗಳಾಗದಂತೆ ಎಚ್ಚರಿಕೆ ವಹಿಸಿ.


ಮೀನ: ಬಹುದಿನಗಳ ನಿಮ್ಮ ಕನಸು ನನಸು ಮಾಡಿಕೊಳ್ಳಲಿದ್ದೀರಿ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ವಹಿಸಬೇಕು. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗವಿದೆ. ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ತೊಂದರೆಯಾಗದು.


ಇದರಲ್ಲಿ ಇನ್ನಷ್ಟು ಓದಿ :