ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಗುರುವಾರ, 25 ನವೆಂಬರ್ 2021 (08:31 IST)
ಬೆಂಗಳೂರು: ಇಂದಿನ
ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


ಮೇಷ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಆರ್ಥಿಕವಾಗಿ ಭವಿಷ್ಯದ ನಿಟ್ಟಿನಲ್ಲಿ ಹೊಸ ಯೋಜನೆಗಳನ್ನು ಹಾಕಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ವೃಷಭ: ವೃತ್ತಿರಂಗದಲ್ಲಿ ಮೇಲ್ವರ್ಗಕ್ಕೇರುವ ನಿಮ್ಮ ಪ್ರಯತ್ನಕ್ಕೆ ಫಲ ಸಿಗಲಿದೆ. ಹಿರಿಯರಿಂದ ಸಂತೋಷ ಸಿಗುವುದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.


ಮಿಥುನ: ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗುವ ಪ್ರಸಂಗ ಎದುರಾದೀತು. ತಾಳ್ಮೆ, ಸಂಯಮ ಅಗತ್ಯ. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.


ಕರ್ಕಟಕ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ವ್ಯವಹರಿಸಬೇಕು. ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸಣ್ಣಪುಟ್ಟ ಏರುಪೇರಾದೀತು. ಎಚ್ಚರಿಕೆ ಅಗತ್ಯ.

ಸಿಂಹ: ದೂರದ ನೆಂಟರಿಷ್ಟರ ಭೇಟಿ ಸಾಧ್ಯತೆಯಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತ ಸ್ಥಾನ ಮಾನದ ಯೋಗ. ನಿರುದ್ಯೋಗಿಗಳ ತಾತ್ಕಾಲಿಕ ಉದ್ಯೋಗ ಸಿಗಲಿದೆ. ದಾಂಪತ್ಯದಲ್ಲಿ ಅನ್ಯೋನ್ಯತೆ ಹೆಚ್ಚಲಿದೆ.


ಕನ್ಯಾ: ಸಂಪತ್ತು ವೃದ್ಧಿಗೆ ನಾನಾ ಮಾರ್ಗಗಳ ಬಗ್ಗೆ ಯೋಚನೆ ಮಾಡಲಿದ್ದೀರಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಪ್ರೇಮಿಗಳಿಗೆ ಮನೆಯವರ ಸಮ್ಮತಿ ಸಿಗುವುದು. ದಿನದಂತ್ಯಕ್ಕೆ ಅಚ್ಚರಿ ಸುದ್ದಿ.


ತುಲಾ: ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಯೋಗ ಕೂಡಿಬರಲಿದೆ. ತಾಳ್ಮೆಯಿರಲಿ.

ವೃಶ್ಚಿಕ: ನಿಮ್ಮ ಮನಸ್ಸಿನಲ್ಲಿ ಮೂಡುವ ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.


ಧನು: ಉದ್ಯೋಗ ಕ್ಷೇತ್ರದಲ್ಲಿ ಗೌರವ, ಸ್ಥಾಮ ಮಾನಾದಿಗಳ ಜೊತೆಗೆ ಹೆಚ್ಚಿನ ಜವಾಬ್ಧಾರಿಗಳೂ ಹೆಗರಲಿಗೇರಲಿವೆ. ಅನಿರೀಕ್ಷಿತ ಸಂಪತ್ತು ವೃದ್ಧಿಯಾಗುವ ಯೋಗವಿದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವ್ಯವಹರಿಸಿ.


ಮಕರ: ಉತ್ತಮ ವಾಕ್ಚತುರತೆಯಿಂದ ನೀವು ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹೊಸದಾಗಿ ಭೇಟಿಯಾಗುವ ಜನರಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾದೀತು.

ಕುಂಭ: ಇಷ್ಟು ದಿನ ಕಾಡುತ್ತಿದ್ದ ಸಮಸ್ಯೆಗಳು ಬೆಣ್ಣೆಯಂತೆ ಕರಗಲಿದೆ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ.


ಮೀನ: ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ತಾಳ್ಮೆಯಿರಲಿ.


ಇದರಲ್ಲಿ ಇನ್ನಷ್ಟು ಓದಿ :